Nelamakanahally (Mandya) ಮಂಡ್ಯ ರಸ್ತೆ ಅಪಘಾತ, ಇಬ್ಬರು ಮಕ್ಕಳು ಸೇರಿದಂತೆ ಐವರ ಸಾವು

road accident near Nelamakanahally in Mandya : ಮಂಡ್ಯದ ನೆಲಮಾಕನಹಳ್ಳಿ ಬಳಿ ಟಿಪ್ಪರ್ ಲಾರಿ ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಮಂಡ್ಯದ ನೆಲಮಾಕನಹಳ್ಳಿ ಬಳಿ ಟಿಪ್ಪರ್ ಲಾರಿ ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು : ಮಂಡ್ಯದ (Mandya) ನೆಲಮಾಕನಹಳ್ಳಿ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ವೇಗವಾಗಿ ಬಂದ ಲಾರಿ – ಆಟೋ ಡಿಕ್ಕಿ ಆಗಿದೆ. ಅಪಘಾತದಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯಾಚರಣೆ ನಡೆಸಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲಾಯಿತು. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಪಘಾತದಿಂದಾಗಿ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.

Five people including two minor children killed in a road accident involving a tipper lorry and an autorickshaw near Nelamakanahally in Mandya