Road Accident : ಹೈದರಾಬಾದ್ನಲ್ಲಿ ಭೀಕರ ರಸ್ತೆ ಅಪಘಾತ, ಇಬ್ಬರು ಸಿನಿಮಾ ಕಲಾವಿದರು ಸಾವು
Road Accident : ಹೈದರಾಬಾದ್ ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಎಚ್ಸಿಯುನಲ್ಲಿ ಪಲ್ಟಿಯಾಗಿ ಡಿವೈಡರ್ ಮಧ್ಯದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ.
Road Accident : ಹೈದರಾಬಾದ್ ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಎಚ್ಸಿಯುನಲ್ಲಿ ಪಲ್ಟಿಯಾಗಿ ಡಿವೈಡರ್ ಮಧ್ಯದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು ಒಬ್ಬರು ಗಾಯಗೊಂಡರು.
ಶನಿವಾರ ಮುಂಜಾನೆ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು.
ಮೃತರನ್ನು ಕಾರು ಚಾಲಕ ಅಬ್ದುಲ್ಲಾ ಮತ್ತು ಇತರ ಇಬ್ಬರು ಜೂನಿಯರ್ ಕಲಾವಿದರು ಎಂದು ಪೊಲೀಸರು ಗುರುತಿಸಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಸಿಧು ಎಂದು ಗುರುತಿಸಲಾಗಿದ್ದು, ಅವರು ಜೂನಿಯರ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರೆಲ್ಲರೂ ಅಮೀರಪೇಟೆಯಲ್ಲೇ ವಾಸವಿದ್ದರು ಎಂದು ತಿಳಿದು ಬಂದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Follow Us on : Google News | Facebook | Twitter | YouTube