Robbery in Delhi : ಗನ್ ತೋರಿಸಿ ಬೆದರಿಸಿ ದರೋಡೆ..
Robbery in Delhi : ರಾಷ್ಟ್ರ ರಾಜಧಾನಿ ದೆಹಲಿಯ ರಸ್ತೆಯೊಂದರಲ್ಲಿ ಇಬ್ಬರು ಪುಂಡರು ಬಂದೂಕು ತೋರಿಸಿ ಬೆದರಿಕೆ ಹಾಕಿ ದರೋಡೆ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ ವಿವೇಕ್ ವಿಹಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ರಸ್ತೆಯೊಂದರಲ್ಲಿ ಇಬ್ಬರು ಪುಂಡರು ಬಂದೂಕು ತೋರಿಸಿ ಬೆದರಿಕೆ ಹಾಕಿ ದರೋಡೆ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ ವಿವೇಕ್ ವಿಹಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಯಮುನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಬಳಿ ಇಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಆಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರನ್ನು ತಡೆದಿದ್ದಾರೆ. ನಂತರ ಜೇಬಿನಿಂದ ಬಂದೂಕನ್ನು ಹೊರತೆಗೆದು ಬೆದರಿಕೆ ಹಾಕಿದ್ದಾರೆ.
ಚಿನ್ನದ ಬಳೆಗಳು, ಇತರೆ ಬೆಲೆಬಾಳುವ ವಸ್ತುಗಳನ್ನು ನೀಡುವಂತೆ ಬೆದರಿಸಿದ್ದಾರೆ. ಬಳಿಕ ಅವುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಈ ಎಲ್ಲಾ ದರೋಡೆ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿವೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
Follow Us on : Google News | Facebook | Twitter | YouTube