School Bus: ಕೆರೆಗೆ ಉರುಳಿದ ಸ್ಕೂಲ್ ಬಸ್, ವಿದ್ಯಾರ್ಥಿ ಸಾವು

ನೆರೆ ರಾಜ್ಯ ಆಂಧ್ರದ ಶ್ರೀಕಾಕುಳಂ ಜಿಲ್ಲೆಯಲ್ಲಿ ಖಾಸಗಿ ಶಾಲಾ ಬಸ್ ಪಲ್ಟಿಯಾಗಿ ಕೆರೆಗೆ ಉರುಳಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಹೌದು ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ನೆರೆ ರಾಜ್ಯ ಆಂಧ್ರದ ಶ್ರೀಕಾಕುಳಂ ಜಿಲ್ಲೆಯಲ್ಲಿ ಖಾಸಗಿ ಶಾಲಾ ಬಸ್ ಪಲ್ಟಿಯಾಗಿ ಕೆರೆಗೆ ಉರುಳಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಹೌದು ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಗಮನಿಸಿದ ಸ್ಥಳೀಯರು ಇತರ ವಿದ್ಯಾರ್ಥಿಗಳನ್ನು ಬಸ್ಸಿನಿಂದ ಹೊರತೆಗೆದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಡಿವಾಣಿಪೇಟೆ ಗ್ರಾಮದ ಮೈಲಪಲ್ಲಿ ರಾಜು (8) ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಹಾರ ಕ್ರಮಗಳನ್ನು ಕೈಗೊಂಡರು. ಘಟನೆ ವೇಳೆ ಬಸ್ ನಲ್ಲಿ ಐವರು ವಿದ್ಯಾರ್ಥಿಗಳು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೆರೆಗೆ ಬಿದ್ದ ಖಾಸಗಿ ಶಾಲಾ ಬಸ್ ಅನ್ನು ಜೆಸಿಬಿ ಸಹಾಯದಿಂದ ಹೊರತೆಗೆಯಲಾಯಿತು. ವಿದ್ಯಾರ್ಥಿಗಳ ಕುಟುಂಬದ ಸದಸ್ಯರು ಅಪಘಾತದ ವಿಷಯ ತಿಳಿದು ಗೋಳಾಡುತ್ತಾ ಕೆರೆಯ ಸುತ್ತಾ ನೆರೆದಿದ್ದರು.

Stay updated with us for all News in Kannada at Facebook | Twitter
Scroll Down To More News Today