ಡಿಜೆ ಕಾರಿನ ಮೇಲೆ ಡ್ಯಾನ್ಸ್ ಮಾಡುವಾಗ ವಿದ್ಯುತ್ ಶಾಕ್; ಇಬ್ಬರ ಸಾವು
ಮಧ್ಯಪ್ರದೇಶದ ಇಂದೋರ್‌ನಲ್ಲಿ ಹಬ್ಬದ ಜೋಶ್‌ನಲ್ಲಿ ಡಿಜೆ ಕಾರಿನ ಮೇಲ್ಭಾಗದಲ್ಲಿ ಡ್ಯಾನ್ಸ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಡಿಜೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ
ಭೋಪಾಲ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಹಬ್ಬದ ಜೋಶ್‌ನಲ್ಲಿ ಡಿಜೆ ಕಾರಿನ ಮೇಲ್ಭಾಗದಲ್ಲಿ ಡ್ಯಾನ್ಸ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಡಿಜೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದ ಸಮಯದಲ್ಲಿ, ಅವರು ಡಿಜೆ ಕಾರಿನ ಮೇಲೆ ನೃತ್ಯ ಮಾಡುತ್ತಿದ್ದರು.
ಈ ವೇಳೆ ಹೈಟೆನ್ಷನ್ ವೈರ್ ತಗುಲಿ ಒಬ್ಬರ ನಂತರ ಒಬ್ಬರು ವಾಹನದಿಂದ ಕೆಳಗೆ ಬಿದ್ದಿದ್ದಾರೆ. ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಗೊಂಡವರೆಲ್ಲರೂ ಇಂದೋರ್‌ನ ಮಹಾರಾಜ ಯಶವಂತ್ ರಾವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಇಬ್ಬರು ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಡಾ.ಅಂಬೇಡ್ಕರ್‌ನಗರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್ಪಿ ಭಗವಂತ್ ಸಿಂಗ್ ತಿಳಿಸಿದ್ದಾರೆ.
seven electrocuted while dancing a top dj car
Follow us On
Google News |
Advertisement