ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ, ಇಬ್ಬರು ಸರ್ಕಾರಿ ಆಸ್ಪತ್ರೆ ವೈದ್ಯರ ಬಂಧನ

ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.

  • ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.

ಚೆನ್ನೈ : ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆ, ಚೆನ್ನೈ ತಮಿಳುನಾಡಿನ ಸರ್ಕಾರಿ ಜನರಲ್ ಆಸ್ಪತ್ರೆಗಳಲ್ಲಿ ವಿಶ್ವ ದರ್ಜೆಯ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆ. ಹೆಸರಾಂತ ವೈದ್ಯಕೀಯ ವೃತ್ತಿಪರರು ಮತ್ತು ದಾದಿಯರು ಇಲ್ಲಿ ಕೆಲಸ ಮಾಡುತ್ತಾರೆ.

ಕಳೆದ ವರ್ಷ ತಮಿಳುನಾಡಿನಲ್ಲಿ ಕೊರೊನಾ ಮೊದಲ ಅಲೆ ಪ್ರಾರಂಭವಾದಾಗ, ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯರು ತೇನಂಪೇಟೆಯ ಒಂದು ಸ್ಟಾರ್ ಹೋಟೆಲ್‌ನಲ್ಲಿ ತಂಗಿದ್ದರು. ಅವರು ಕೊರೊನಾ ಚಿಕಿತ್ಸೆ ಕಾರ್ಯದಲ್ಲಿ ನಿರತರಾಗಿರುವ ಕಾರಣ ಅವರು ತಮ್ಮನ್ನು ಪ್ರತ್ಯೇಕಿಸಿಕೊಳ್ಳಬೇಕು ಎಂಬ ಆಧಾರದ ಮೇಲೆ ತಮಿಳುನಾಡು ಸರ್ಕಾರ ಈ ವ್ಯವಸ್ಥೆಯನ್ನು ಮಾಡಿದೆ.

ಕರೋನಾ ಚಿಕಿತ್ಸೆಯಲ್ಲಿದ್ದ ಮಹಿಳಾ ವೈದ್ಯರು ಕೂಡ ಅದೇ ಸ್ಟಾರ್ ಹೋಟೆಲ್‌ನಲ್ಲಿ ತಂಗಿದ್ದರು. ಈ ವೇಳೆ ಅಲ್ಲಿಯೇ ತಂಗಿದ್ದ ವೈದ್ಯ, ಮಹಿಳಾ ವೈದ್ಯೆಯೊಬ್ಬರು ಇದ್ದ ಕೊಠಡಿಗೆ ತೆರಳಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಅದೇ ರೀತಿ ಮತ್ತೊಬ್ಬ ವೈದ್ಯ ಮತ್ತೊಬ್ಬ ಮಹಿಳಾ ವೈದ್ಯೆಯೊಂದಿಗೆ ಲೈಂಗಿಕ ದೌರ್ಜನ್ಯಕ್ಕೆ ಪ್ರಯತ್ನಪಟ್ಟಿದ್ದಾನೆ. ಈ ಬಗ್ಗೆ ಸಂತ್ರಸ್ತ ಮಹಿಳಾ ವೈದ್ಯರಿಬ್ಬರೂ ಡೀನ್‌ಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆಗೆ ಸಮಿತಿ ರಚಿಸಲಾಗಿತ್ತು.

ಆಗ ಇಬ್ಬರೂ ಆರೋಪಿ ವೈದ್ಯರು ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ತೇನಂಪೇಟೆ ಪೊಲೀಸರು ಇಬ್ಬರು ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ತಮಿಳುನಾಡಿನ ಜನಪ್ರಿಯ ಸರ್ಕಾರಿ ಆಸ್ಪತ್ರೆ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರನ್ನು ಬಂಧಿಸಿರುವುದು ಸಂಚಲನ ಮೂಡಿಸಿದೆ.