Crime News

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ರಾಂಚಿ: ಇಬ್ಬರು ವ್ಯಕ್ತಿಗಳು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನಂತರ ಗ್ರಾಮಸ್ಥರು ಸಜೀವ ದಹನ ಮಾಡಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಈ ದುಷ್ಕೃತ್ಯ ನಡೆದಿದೆ.

ಸಂತ್ರಸ್ತೆಯ ಕುಟುಂಬ ಪಕ್ಕದ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಗ್ರಾಮಕ್ಕೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಆ ಸಮಯದಲ್ಲಿ ಬಸ್‌ಗಳು ಇಲ್ಲದ ಕಾರಣ ಸಂತ್ರಸ್ತೆಯ ತಂದೆ ಅದೇ ಗ್ರಾಮದ ಇಬ್ಬರು ಯುವಕರಿಗೆ ಬಾಲಕಿಯನ್ನು ಬೈಕ್‌ನಲ್ಲಿ ಊರಿಗೆ ಬಿಡುವಂತೆ ಕೇಳಿದ್ದಾರೆ. ಗ್ರಾಮಕ್ಕೆ ತೆರಳುವಾಗ ಮಾರ್ಗಮದ್ಯೆ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದ ಆರೋಪಿಗಳು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಗೆ ಬೆಂಕಿ ಹಚ್ಚಿದ ಗ್ರಾಮಸ್ಥರು - Kannada News

ಬಾಲಕಿ ಮನೆಗೆ ಮರಳಿದ ಬಳಿಕ ನಡೆದ ಘಟನೆಯನ್ನು ಹೇಳಿದಾಗ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಅವರ ಮೇಲೆ ಸೀಮೆಎಣ್ಣೆ ಸುರಿದಿದ್ದಾರೆ. ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಆರೋಪಿ ಸುಟ್ಟ ಗಾಯಗಳೊಂದಿಗೆ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (RIMS) ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Shocking Incident Minor Abused Angry Locals Set Two Accused Ablaze

Related Stories

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ