ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ, ಟ್ರಕ್‌ಗೆ ಬಸ್ ಡಿಕ್ಕಿಯಾಗಿ ಆರು ಮಂದಿ ಸಾವು
ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚೆಂಗಲ್ಪಟ್ಟು ಬಳಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚೆಂಗಲ್ಪಟ್ಟು ಬಳಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚೆನ್ನೈ-ತಿರುಚಿರಾಪಳ್ಳಿ ರಾಷ್ಟ್ರೀಯ ಹೆದ್ದಾರಿಯ ಮಧುರಾಂತಕ್‌ನಲ್ಲಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹತ್ತು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಇದೇ ವೇಳೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ ರೂ.5 ಲಕ್ಷ ನೆರವು ಘೋಷಿಸಲಾಗಿದೆ.
ಚೆಂಗಲ್ಪಟ್ಟು ಪೊಲೀಸರ ಪ್ರಕಾರ, ಬಸ್ ಚೆನ್ನೈನಿಂದ ತಿರುಚಿ ಹೆದ್ದಾರಿಯಲ್ಲಿ ಚಿದಂಬರಂ ಪಟ್ಟಣಕ್ಕೆ ಹೋಗುತ್ತಿತ್ತು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
six dead 10 injured after bus rammed into lorry in Tamil Nadu
Tamil Nadu | 6 dead, over 10 injured after a bus allegedly rammed into a lorry which was stationary, in Chengalpattu this morning, confirms district police pic.twitter.com/csxamjHiVb
— ANI (@ANI) July 8, 2022
Follow us On
Google News |