Barabanki, ಬಾರಾಬಂಕಿ ಅಪಘಾತದಲ್ಲಿ ಆರು ಮಂದಿ ಸಾವು

ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಕ್ನೋ-ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ವೇಗವಾಗಿ ಬಂದ ಕಾರು ನಿಂತಿದ್ದ ಕಂಟೈನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 

Online News Today Team

ಲಕ್ನೋ: ಉತ್ತರ ಪ್ರದೇಶದ ಬಾರಾಬಂಕಿ (Barabanki) ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಲಕ್ನೋ-ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ವೇಗವಾಗಿ ಬಂದ ಕಾರು ನಿಂತಿದ್ದ ಕಂಟೈನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾರಿನಿಂದ ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರೆಲ್ಲರೂ ಗುಜರಾತ್‌ನ ಅಹಮದಾಬಾದ್‌ಗೆ ಸೇರಿದವರು ಎಂದು ಗುರುತಿಸಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Follow Us on : Google News | Facebook | Twitter | YouTube