ರಾಜಕೀಯ ವೈಷಮ್ಯ: ಚಾಕುವಿನಿಂದ ಇರಿದು ಹಲ್ಲೆ

ಗ್ರಾ.ಪಂ. ಚುನಾವಣೆ ಸಂಬಂಧ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ನಡೆಸುತ್ತಿದ್ದ ವೇಳೆ ರಾಜಕೀಯ ವೈಷಮ್ಯದಿಂದ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ತಾಲೂಕಿನ ಸೀನಪ್ಪನದೊಡ್ಡಿ ಗ್ರಾಮದಲ್ಲಿ ನಡೆದಿದೆ.

(Kannada News) : ಮದ್ದೂರು: ಗ್ರಾ.ಪಂ. ಚುನಾವಣೆ ಸಂಬಂಧ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ನಡೆಸುತ್ತಿದ್ದ ವೇಳೆ ರಾಜಕೀಯ ವೈಷಮ್ಯದಿಂದ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ತಾಲೂಕಿನ ಸೀನಪ್ಪನದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪರ ವೆಂಕಟಾಚಲ ಅವರು ಗ್ರಾ.ಪಂ. ಚುನಾವಣೆ ಹಿನ್ನೆಲೆಯಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸುತ್ತಿದ್ದ ವೇಳೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯ ಬೆಂಬಲಿಗರಾದ ಪುಟ್ಟಸ್ವಾಮಿ, ಮಲ್ಲೇಶ್ ಎಂಬುವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಮಾತಿನ ಚಕಮಕಿ ವೇಳೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಚಾಕುವಿನಿಂದ ಮಾರಣಾಂತಿಕ ಹಲ್ಲೆಗೆ ಮುಂದಾದ ಘಟನೆ ಜರುಗಿದೆ.

ಚಾಕುವಿನಿಂದ ಇರಿತಕ್ಕೊಳಗಾದ ವೆಂಕಟಾಚಲ ಅವರಿಗೆ ಬಲಗೈಗೆ ತೀವ್ರವಾಗಿ ಗಾಯಗಳಾಗಿದ್ದು, ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಾರೆ.

ಚಾಕುವಿನಿಂದ ಇರಿತಕ್ಕೊಳಗಾದ ವೆಂಕಟಾಚಲ
ಚಾಕುವಿನಿಂದ ಇರಿತಕ್ಕೊಳಗಾದ ವೆಂಕಟಾಚಲ

ಕಾಂಗ್ರೆಸ್ ಬೆಂಬಲಿತ ವೆಂಕಟಾಚಲಯ್ಯ ಅವರು ಈ ಹಿಂದೆ ಜೆಡಿಎಸ್ ಪಕ್ಷದ ಬೆಂಬಲಿತರಾಗಿ ಉತ್ತಮ ಒಡನಾಟ ಹೊಂದಿದ್ದು ಗ್ರಾ.ಪಂ. ಚುನಾವಣೆ ಹಿನ್ನೆಲೆಯಲ್ಲಿ ವೈಮನಸ್ಸು ಉಂಟಾಗಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಕೈಗೊಂಡಿದ್ದ ವೇಳೆ ಜೆಡಿಎಸ್ ಪಕ್ಷದ ಕಾರ್ಯಕರ್ತರಾದ ಪುಟ್ಟಸ್ವಾಮಿ, ಮಲ್ಲೇಶ್ ಅವರು ಪ್ರಚಾರದ ವೇಳೆ ಮಾತಿನ ಚಕಮಕಿ ನಡೆದ ವೇಳೆ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಈ ಸಂಬಂಧ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಚಾಕುವಿನಿಂದ ಹಲ್ಲೆ ನಡೆಸಿದ ಇಬ್ಬರು ನಾಪತ್ತೆಯಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮವಹಿಸಿದ್ದಾರೆ.

Web Title : Stabbed with a knife for political hatred

Scroll Down To More News Today