ರಾಯಚೂರಿನ ಸರ್ಕಾರಿ ಶಾಲೆಯ ಆವರಣದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ರಾಯಚೂರಿನಲ್ಲಿ ಸರ್ಕಾರಿ ಶಾಲಾ ಆವರಣದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸೂಗುರು ತಾಲ್ಲೂಕಿನ ಅನ್ವರಿ ಗ್ರಾಮದ ಗಂಗಣ್ಣ (ವಯಸ್ಸು 14) ಶಾಲೆಗೆ ಹೋಗಲು ಇಷ್ಟವಿಲ್ಲದ ಕಾರಣಕ್ಕೆ ಮಲ್ಲದಗುಡ್ಡ ಸರ್ಕಾರಿ ಶಾಲಾ ಆವರಣದಲ್ಲಿ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಪೊಲೀಸ್ ಠಾಣೆ ವ್ಯಾಪ್ತಿಯ ಮಾನ್ವಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಗಂಗಣ್ಣ ಅದೇ ಗ್ರಾಮದ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡು ಶಾಲೆಗೆ ಹೋಗುತ್ತಿದ್ದ. ನಿನ್ನೆ ಬೆಳಗ್ಗೆ ಎಂದಿನಂತೆ ಶಾಲೆಗೆ ತೆರಳಿದ್ದ.
ಆದರೆ ತನ್ನ ಶಾಲೆಗೆ ಹೋಗದೆ ಗ್ರಾಮದ ಸರ್ಕಾರಿ ಶಾಲೆಗೆ ತೆರಳಿ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
student suicide in government school campus in Raichur
Follow us On
Google News |
Advertisement