ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸರಕಾರಿ ಶಾಲೆಯ ದೈಹಿಕ ಶಿಕ್ಷಕ ಅಮಾನತು

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕನನ್ನು ಅಮಾನತುಗೊಳಿಸಿ ಪ್ರಾದೇಶಿಕ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕನನ್ನು ಅಮಾನತುಗೊಳಿಸಿ ಪ್ರಾದೇಶಿಕ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿ ಸರಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ 6ನೇ ತರಗತಿಯಿಂದ 10ನೇ ತರಗತಿವರೆಗೆ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಪ್ರಭು ನಾಯಕ್ ಅವರು ಈ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಶಿಕ್ಷಕ ಪ್ರಭುನಾಯಕ್ ದೈಹಿಕ ಶಿಕ್ಷಣ ತರಗತಿ ವೇಳೆ ವಿದ್ಯಾರ್ಥಿನಿಯರ ದೇಹ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಈತ ವಿದ್ಯಾರ್ಥಿನಿಯರ ಜೊತೆ ಅಶ್ಲೀಲವಾಗಿ ಮಾತನಾಡಿದ್ದ ಎನ್ನಲಾಗಿದೆ. ವಿದ್ಯಾರ್ಥಿಗಳು ಪೋಷಕರ ಮೂಲಕ ಮುಖ್ಯೋಪಾಧ್ಯಾಯರಿಗೆ ದೂರು ನೀಡಿದ್ದಾರೆ. ಈ ಕುರಿತು ಮುಖ್ಯಶಿಕ್ಷಕರು ಪ್ರಾದೇಶಿಕ ಶಿಕ್ಷಣಾಧಿಕಾರಿ ದುರ್ಗಪ್ಪ ಅವರಿಗೆ ಮಾಹಿತಿ ನೀಡಿದರು.

ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಶಿಕ್ಷಣಾಧಿಕಾರಿ ದುರ್ಗಪ್ಪ ಅವರು ಶಿಕ್ಷಕ ಪ್ರಭುನಾಯಕ್ ಅವರನ್ನು 10 ದಿನಗಳ ಕಡ್ಡಾಯ ರಜೆ ಮೇಲೆ ಕಳುಹಿಸಿದ್ದಾರೆ. ಇನ್ನಾದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳ ಪೋಷಕರು ಆಗ್ರಹಿಸಿದ್ದಾರೆ. ಶಿಕ್ಷಕ ಪ್ರಭು ನಾಯಕ್ ವಿರುದ್ಧ ಪ್ರಾದೇಶಿಕ ಶಿಕ್ಷಣಾಧಿಕಾರಿ ದುರ್ಗಪ್ಪ ಎನ್.ಆರ್.ಪುರ ಪೊಲೀಸರಿಗೆ ದೂರು ನೀಡಿದ್ದಾರೆ.

ಶಿಕ್ಷಕ ಪ್ರಭು ನಾಯಕ್ ವಿರುದ್ಧ ಪೋಕ್ಚೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಿಂದಿನ ದೂರಿನ ವಿಷಯ ತಿಳಿದ ಶಿಕ್ಷಕ ಪ್ರಭುದೇವ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆತನಿಗಾಗಿ ಜಾಲ ಬೀಸುತ್ತಿದ್ದಾರೆ.

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಪ್ರಭುನಾಯ್ಕ ಅವರನ್ನು ಅಮಾನತುಗೊಳಿಸಿ ಪ್ರಾದೇಶಿಕ ಶಿಕ್ಷಣಾಧಿಕಾರಿ ದುರ್ಗಪ್ಪ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚೀಂದ್ರ ಹಾಗೂ ಉಪ ಪೊಲೀಸ್ ವರಿಷ್ಠಾಧಿಕಾರಿ ಸುರುಡಿ ಅವರು ನಿನ್ನೆ ಸರಕಾರಿ ಶಾಲೆಗೆ ತೆರಳಿದ್ದರು. ಅವರು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದರು.

ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚೀಂದ್ರ ನಂತರ ವಿದ್ಯಾರ್ಥಿಗಳಿಗೆ ತಿಳಿಸಿದರು. ತಮಗಾದ ದೌರ್ಜನ್ಯವನ್ನು ಧೈರ್ಯದಿಂದ ಹೊರತಂದ ವಿದ್ಯಾರ್ಥಿಗಳಿಗೆ ನನ್ನ ಅಭಿನಂದನೆಗಳು ತಿಳಿಸಿದರು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಭಯಪಡಬಾರದು. ಅದೇ ರೀತಿ ಬೋಲ್ಡ್ ಆಗಿರಿ. ಶಿಕ್ಷಕ ಪ್ರಭುನಾಯಕ್ ವಿರುದ್ಧ ಪೋಕ್ಚೋದಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Follow Us on : Google News | Facebook | Twitter | YouTube