ಹೈದರಾಬಾದ್ ನಲ್ಲಿ ಭೀಕರ ರಸ್ತೆ ಅಪಘಾತ, ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ

ಹೈದರಾಬಾದ್ ನ ವಿಕಾರಾಬಾದ್ ಜಿಲ್ಲೆಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ

ಹೈದರಾಬಾದ್: ವಿಕಾರಾಬಾದ್ ಜಿಲ್ಲೆಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಜಿಲ್ಲೆಯ ಪುದೂರಿನ ಉಕ್ಕಿನ ಕಾರ್ಖಾನೆಯೊಂದರ ಸಮೀಪ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮೃತರನ್ನು ಜಹೀರಾಬಿ (68), ಜಾವೇದ್ (12) ಮತ್ತು ಉಮರ್ (6) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

three died after car collided with lorry in Hyderabad vikarabad

ಹೈದರಾಬಾದ್ ನಲ್ಲಿ ಭೀಕರ ರಸ್ತೆ ಅಪಘಾತ, ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ - Kannada News

Follow us On

FaceBook Google News

Advertisement

ಹೈದರಾಬಾದ್ ನಲ್ಲಿ ಭೀಕರ ರಸ್ತೆ ಅಪಘಾತ, ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ - Kannada News

Read More News Today