Welcome To Kannada News Today

Yelahanka : ಮಾನವ ಕಳ್ಳಸಾಗಣೆ ಮಾಡಲಾಗಿದ್ದ ಮೂವರು ಮಹಿಳೆಯರ ರಕ್ಷಣೆ

ಕೆಲಸ ಕೊಡಿಸುವ ಆಸೆ ತೋರಿ, ದೆಹಲಿಯಿಂದ ಬೆಂಗಳೂರು ನಗರಕ್ಕೆ ಮಾನವ ಕಳ್ಳಸಾಗಣೆ ಮಾಡಲಾಗಿದ್ದ ಮೂವರು ಮಹಿಳೆಯರನ್ನು ಯಲಹಂಕ ರೈಲ್ವೇ ನಿಲ್ದಾಣದಲ್ಲಿ ರಕ್ಷಿಸಲಾಗಿದೆ.

🌐 Kannada News :

Three women, trafficked from Delhi, rescued at Yelahanka railway station : ಉದ್ಯೋಗ ಕೊಡಿಸುವ ಆಸೆ ತೋರಿಸಿ ದೆಹಲಿಯಿಂದ ಬೆಂಗಳೂರು ನಗರಕ್ಕೆ ಮಾನವ ಕಳ್ಳಸಾಗಣೆ ಮಾಡಲಾಗಿದ್ದ ಮೂವರು ಮಹಿಳೆಯರನ್ನು ರಕ್ಷಣೆ ಮಾಡಿರುವ ಘಟನೆ ಯಲಹಂಕ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ಮಹಿಳೆಯರಿಗೆ ಉದ್ಯೋಗ ಅವಕಾಶ ನೀಡುವ ಆಸೆ ತೋರಿಸಿ ಬೆಂಗಳೂರಿಗೆ ಕರೆತರಲಾಗಿತ್ತು. ನಂತರ ಅವರನ್ನು ವೇಶ್ಯಾವಾಟಿಕೆಗೆ ತಳ್ಳಲು ಯತ್ನಸಲಾಗಿತ್ತು. ಈ ಸಮಯದಲ್ಲಿ ಬುದ್ಧಿವಂತಿಕೆ ತೋರಿದ ಮಹಿಳೆಯರು ಅಲ್ಲಿಂದ ತಪ್ಪಿಸಿಕೊಂಡು ಯಲಹಂಕ ರೈಲ್ವೆ ನಿಲ್ದಾಣವನ್ನು ತಲುಪಿದ್ದಾರೆ. ಪ್ರಸ್ತುತ ಮಹಿಳೆಯರು ಮಕ್ಕಳ ಕಲ್ಯಾಣ ಸಮಿತಿಯ ಆಶ್ರಯದಲ್ಲಿದ್ದು, ಶೀಘ್ರದಲ್ಲೇ ತವರಿಗೆ ಮರಳಲಿದ್ದಾರೆಂದು ತಿಳಿದುಬಂದಿದೆ.

ಮೂವರು ಮಹಿಳೆಯರ ಪೈಕಿ ಓರ್ವ ಮಹಿಳೆ ಘಾಜಿಯಾಬಾದ್’ನ ರಾಜಕೀಯ ಪಕ್ಷದ ಜಿಲ್ಲಾ ಮಟ್ಟದ ನಾಯಕರೊಬ್ಬರ ಪುತ್ರಿಯಾಗಿದ್ದು, ಉಳಿದ ಇನ್ನಿಬ್ಬರು ಆಕೆಯ ಸಂಬಂಧಿಕರೆಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಉದ್ಯೋಗ ಕೊಡಿಸುವ ಆಸೆ ತೋರಿಸಿ ಮೂವರನ್ನು ಆಗಸ್ಟ್ 30 ರ ರಾತ್ರಿ ದೆಹಲಿ ವಿಮಾನ ನಿಲ್ದಾಣದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂಡಿಗೋ ವಿಮಾನದಲ್ಲಿ ಕರೆತರಲಾಗಿದೆ ಎಂದು ಆರ್‌ಪಿಎಫ್ ಮೂಲಗಳು ತಿಳಿಸಿವೆ.

📱 Latest Kannada News ಗಳಿಗಾಗಿ Kannada News Today App ಡೌನ್ ಲೋಡ್ ಮಾಡಿಕೊಳ್ಳಿ.
📣 All Kannada News Now in our Facebook Page.
Contact for web design services Mobile