ಗಡಿಯಲ್ಲಿ ಸಾಮೂಹಿಕ ಅತ್ಯಾಚಾರ.. ಇಬ್ಬರು ಬಿಎಸ್‌ಎಫ್ ಯೋಧರ ಬಂಧನ

ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಬರಲು ಯತ್ನಿಸಿದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. 

ಕೋಲ್ಕತ್ತಾ: ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಬರಲು ಯತ್ನಿಸಿದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಬಿಎಸ್‌ಎಫ್ ಯೋಧರನ್ನು ಬಂಧಿಸಲಾಗಿದೆ. ಬಿಎಸ್‌ಎಫ್ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ನನ್ನು ಶುಕ್ರವಾರ ರಾತ್ರಿ ಪಶ್ಚಿಮ ಬಂಗಾಳ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಇಬ್ಬರನ್ನೂ ಆರೋಪಿಗಳನ್ನಾಗಿ ಸೇರಿಸಿ ನ್ಯಾಯಾಲಯದ ವಿಚಾರಣೆಗೆ ಆದೇಶಿಸಲಾಗಿದೆ. ಬಾಗ್ದಾದ್ ಗಡಿ ಹೊರಠಾಣೆಯಲ್ಲಿ ಆಗಸ್ಟ್ 26 ರಂದು ಈ ಘಟನೆ ನಡೆದಿದೆ.

ಇದನ್ನೂ ಓದಿ : ವಿಕ್ರಾಂತ್ ರೋಣ ಬರೋಬ್ಬರಿ 200 ಕೋಟಿ ಕಲೆಕ್ಷನ್ ದಾಖಲೆ

ಇದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಬಾಂಗ್ಲಾದೇಶದಿಂದ ನುಸುಳಲು ಯತ್ನಿಸಿದ ಮಹಿಳೆಯನ್ನು ಸಮೀಪದ ಹೊಲಗಳಿಗೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿದೆ.ಈ ವೇಳೆ ಕರ್ತವ್ಯದಲ್ಲಿದ್ದ ಎಎಸ್ ಐ ಪೇದೆಗೆ ಸಹಾಯ ಮಾಡಿದ್ದಾರೆ ಎಂಬ ಆರೋಪಗಳಿವೆ. ಮಹಿಳೆ ಪೊಲೀಸರಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.

two bsf personnel arrested over woman rape along india bangla border