ವಿಜಯಪುರ ಬಳಿ ಬುಲೆರೋ-ಬೈಕ್ ಡಿಕ್ಕಿ: ಇಬ್ಬರು ಸಾವು
ವಿಜಯಪುರ ತಾಲೂಕಿನ ಅಡಹಳ್ಳಿ ಗ್ರಾಮದಲ್ಲಿ ದ್ವಿಚಕ್ರವಾಹನ ಮತ್ತು ಬುಲೆರೋ ವಾಹನ ಮುಖಾಮುಖಿ ಡಿಕ್ಕಿ
ವಿಜಯಪುರ: ಬುಲೆರೋ ವಾಹನ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಸಾವನಪ್ಪಿರುವ ಘಟನೆ ವಿಜಯಪುರ ತಾಲೂಕಿನ ಕವಲಗಿ ಗ್ರಾಮದ ಬಳಿ ನಡೆದಿದೆ. ನಿನ್ನೆ ಮಧ್ಯಾಹ್ನ ವಿಜಯಪುರ ತಾಲೂಕಿನ ಕವಲಗಿ ಗ್ರಾಮದಲ್ಲಿ ದ್ವಿಚಕ್ರವಾಹನ ಮತ್ತು ಜೀಪು ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ದೀಪ ಭೀಮು ರಾಠೋಡ (17) ಹಾಗೂ ಅನೀಲ ಚಿನ್ನು ರಾಠೋಡ (17) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತಕ್ಕೆ ಸಂಬಂಧಿಸಿದಂತೆ ವಿಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅಪಘಾತ ಬಳಿಕ ಬುಲೆರೋ ಚಾಲಕ ಸ್ಥಳದಲ್ಲಿಯೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ,ಡ್ರೈವರ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Two killed in bike-bolero collision in Vijayapura