Accident, ಟೀ ಸ್ಟಾಲ್‌ಗೆ ಟ್ರಕ್ ಡಿಕ್ಕಿ, ಆರು ಮಂದಿ ಸಾವು

ಲಕ್ನೋ (Lucknow) : ಉತ್ತರ ಪ್ರದೇಶದ ಗಾಜಿಪುರದಲ್ಲಿ (Ghazipur in Uttar Pradesh) ಭೀಕರ ರಸ್ತೆ ಅಪಘಾತ (road accident) ಸಂಭವಿಸಿದೆ. ವೇಗವಾಗಿ ಬಂದ ಟ್ರಕ್ ಟೀ ಸ್ಟಾಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ (Six people were killed and several others were injured).

ಇದರಿಂದ ಆಕ್ರೋಶಗೊಂಡ ಸ್ಥಳೀಯರು ಚಾಲಕನನ್ನು ಹಿಡಿದು ಥಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಚಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಪೊಲೀಸರ ಪ್ರಕಾರ, ಅಹಮದಾಬಾದ್‌ನ ಕೊತ್ವಾಲಿಯ ಅಹಿರೋಲಿ ಉಪನಗರದಲ್ಲಿರುವ ಟೀ ಸ್ಟಾಲ್‌ನಲ್ಲಿ ಜನರು ಕುಳಿತಿದ್ದರು. ಬೆಳಿಗ್ಗೆ ಭಾರೌಲಿಯಿಂದ ವೇಗವಾಗಿ ಬಂದ ಟ್ರಕ್ ನಿಯಂತ್ರಣ ತಪ್ಪಿ ಟೀ ಸ್ಟಾಲ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಇಬ್ಬರು ಮೃತಪಟ್ಟಿದ್ದಾರೆ. ಸಿಟ್ಟಿಗೆದ್ದ ಗ್ರಾಮಸ್ಥರು ಲಾರಿ ಚಾಲಕನನ್ನು ಹಿಡಿದು ಥಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ಆಗಮಿಸಿ ಚಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಗ್ರಾಮಸ್ಥರು ಶವಗಳನ್ನು ರಸ್ತೆಯಲ್ಲೇ ಇಟ್ಟು ಆತಂಕ ವ್ಯಕ್ತಪಡಿಸಿದರು. ವಿಷಯ ತಿಳಿದ ಜಿಲ್ಲಾಧಿಕಾರಿ, ಎಸ್ಪಿ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರನ್ನು ಸಮಾಧಾನಪಡಿಸಿದರು.

Stay updated with us for all News in Kannada at Facebook | Twitter
Scroll Down To More News Today