ಉತ್ತರಾಖಂಡದಲ್ಲಿ ವ್ಯಾನ್ ಕಂದಕಕ್ಕೆ ಬಿದ್ದು 13 ಸಾವು !

ಉತ್ತರಾಖಂಡ್‌ನ ಚಕ್ರತಾದಲ್ಲಿ ವ್ಯಾನ್ ಕಂದಕಕ್ಕೆ ಬಿದ್ದು ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ, ಪ್ರಧಾನಿ ಮೋದಿ ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ

🌐 Kannada News :

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಉತ್ತರಾಖಂಡ್‌ನ ಚಕ್ರತಾದಲ್ಲಿ ಆಳವಾದ ಕಂದಕಕ್ಕೆ ವ್ಯಾನ್ ಬಿದ್ದ ಪರಿಣಾಮ 13 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಭಾನುವಾರ ಚಕ್ರತಾ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. 15 ಮಂದಿ ಪ್ರಯಾಣಿಕರೊಂದಿಗೆ ತುನಿಯಿಂದ ವಿಕಾಸ್ ನಗರಕ್ಕೆ ತೆರಳುತ್ತಿದ್ದ ವ್ಯಾನ್ ಬಯಲು ಗ್ರಾಮದ ಬಳಿ ನಿಯಂತ್ರಣ ತಪ್ಪಿದೆ. 13 ಮಂದಿಯ ಮೃತದೇಹಗಳು ಪತ್ತೆಯಾಗಿವೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಕ್ರತಾದ ಬುಲ್ಹಾದ್-ಬೈಲಾ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಬಸ್ ಬೈಲದಿಂದ ವಿಕಾಸನಗರಕ್ಕೆ ತೆರಳುತ್ತಿದ್ದಾಗ ವಾಹನ ಕಂದಕಕ್ಕೆ ಉರುಳಿದೆ.

ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ನಂತರ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡವು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿತು.

ಮೃತರ ಕುಟುಂಬಕ್ಕೆ ಆರ್ಥಿಕ ನೆರವು ಘೋಷಿಸಿದ ಪ್ರಧಾನಿ ಮೋದಿ

ಸಂತ್ರಸ್ತರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

➟ ☞ Kannada News Today ಸುದ್ದಿಗಾಗಿ FacebookTwitter ಅನುಸರಿಸಿ. Google News | News App ಡೌನ್ಲೋಡ್ ಮಾಡಿಕೊಳ್ಳಿ.
Scroll Down To More News Today