vijayapura Accident: ಲಾರಿಗೆ ಕಾರು ಡಿಕ್ಕಿ, ಐವರ ದುರ್ಮರಣ

vijayapura Accident: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಲಾರಿ ಚಾಲಕ ಸೇರಿ ಐವರು ಮೃತಪಟ್ಟಿದ್ದಾರೆ,ಈ ದಾರುಣ ಘಟನೆ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ವಿಜಯಪುರ (vijayapura Accident) : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಲಾರಿ ಚಾಲಕ ಸೇರಿ ಐವರು ಮೃತಪಟ್ಟಿದ್ದಾರೆ,ಈ ದಾರುಣ ಘಟನೆ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನಗರದ ಸಾಯಿಪಾರ್ಕ್ ನಿವಾಸಿ, ವೃತ್ತಿಯಲ್ಲಿ ಶಿಕ್ಷಕನಾಗಿದ್ದ ಮಂಜುನಾಥ ಮುಂಡೇವಾಡಿ (42), ಪತ್ನಿ ಸಾವಿತ್ರಿ (37), ಪುತ್ರಿ ಆರಾಧ್ಯಾ (08)  ಆಯುಕ್ತಾ(4) ಹಾಗೂ ಕೆಟ್ಟು ನಿಂತಿದ್ದ ಲಾರಿ ರಿಪೇರಿ ಮಾಡುತ್ತಿದ್ದ ಮಹಾರಾಷ್ಟ್ರ ಬೀಡ್‌ ಜಿಲ್ಲೆಯ ಲಾರಿ ಚಾಲಕ ಥಾಯಿರ್‌ ಪಠಾಣ (33) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಅಪ್ಪುಗೌಡ ಹಾಗೂ ಆಯುಕ್ತಾ ಎಂಬುವವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು‌. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಯುಕ್ತಾ ಕೊನೆಯುಸಿರೆಳೆದಿದ್ದಾರೆ. ಆದ್ದರಿಂದ ಧಾರುಣ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದೆ. ಮಂಜುನಾಥ ಕುಟುಂಬ ಸದಸ್ಯರು ಪ್ರವಾಸಕ್ಕೆಂದು ಗೋವಾಕ್ಕೆ ತೆರಳಿ, ಗೋವಾದಿಂದ ಬುಧವಾರ ಬೆಳಗ್ಗೆ ವಿಜಯಪುರಕ್ಕೆ ವಾಪಾಸ್ಸಾಗುತ್ತಿದ್ದರು.