ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ರೈಲ್ವೆ ನೌಕರರು
ದೆಹಲಿ ರೈಲು ನಿಲ್ದಾಣದಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಆರೋಪಿ ನಾಲ್ವರು ರೈಲ್ವೆ ನೌಕರರನ್ನು ಪೊಲೀಸರು ಬಂಧಿಸಿ ರಿಮಾಂಡ್‌ಗೆ ಕಳುಹಿಸಿದ್ದಾರೆ.
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಅಮಾನುಷ ಘಟನೆ ನಡೆದಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಆರೋಪಿ ನಾಲ್ವರು ರೈಲ್ವೆ ನೌಕರರನ್ನು ಪೊಲೀಸರು ಬಂಧಿಸಿ ರಿಮಾಂಡ್‌ಗೆ ಕಳುಹಿಸಿದ್ದಾರೆ.
ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿರುವ ವಿದ್ಯುತ್ ನಿರ್ವಹಣಾ ಕೊಠಡಿಯಲ್ಲಿ ಗುರುವಾರ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೈಲ್ವೆ ಡಿಸಿಪಿ ಪ್ರಕಾರ, ಆರೋಪಿಗಳಲ್ಲಿ ಒಬ್ಬನು ತನ್ನ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಹರಿಯಾಣದ ಫರಿದಾಬಾದ್‌ನ ಸಂತ್ರಸ್ತ ಮಹಿಳೆಯೊಂದಿಗೆ ಎರಡು ವರ್ಷಗಳ ಹಿಂದೆ ಸ್ನೇಹಿತನ ಮೂಲಕ ಸಂಪರ್ಕಕ್ಕೆ ಬಂದಿದ್ದನು.
ತಾನು ರೈಲ್ವೆ ಉದ್ಯೋಗಿ ಎಂದು ಪರಿಚಯಿಸಿಕೊಂಡು ಮಹಿಳೆಗೂ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದಾನೆ. ಆಗಾಗ ಫೋನ್ ನಲ್ಲಿ ಮಾತನಾಡುತ್ತಿದ್ದರು. ಇದೇ ತಿಂಗಳ 21ರಂದು ನಡೆಯಲಿರುವ ಮಗನ ಹುಟ್ಟುಹಬ್ಬ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಕೆಯನ್ನು ಆಹ್ವಾನಿಸಿದ್ದರು.
ಸಮಾರಂಭದ ಬಳಿಕ ಆಕೆಯನ್ನು ದೆಹಲಿ ರೈಲು ನಿಲ್ದಾಣಕ್ಕೆ ಕರೆತಂದರು. ಎಲೆಕ್ಟ್ರಿಕಲ್ ಮೆಂಟೆನೆನ್ಸ್ ರೂಮಿನಲ್ಲಿ ಕೂರಲು ಹೇಳಿ ಹೊರಟು ಹೋದ.. ನಂತರ ಗೆಳೆಯರೊಂದಿಗೆ ಬಂದ. ಮೊದಲು ಇಬ್ಬರು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಬಳಿಕ ಕಾವಲುಗಾರರಂತೆ ಇದ್ದ ಮತ್ತಿಬ್ಬರು ಸಹ ಆಕೆಯ ಮೇಲೆ ಲೈಂಗಿಕ ಕೃತ್ಯ ಎಸಗಿದ್ದಾರೆ. ಸಂತ್ರಸ್ತೆ ಶುಕ್ರವಾರ ನಡೆದ ಘಟನೆ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದಾಳೆ. ಅವರು ಆರ್‌ಪಿಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
woman gang raped inside station 4 railway employees held
Follow us On
Google News |