ಮೆಟ್ರೋ ರೈಲಿನಡಿಗೆ ಬಿದ್ದು ಮಹಿಳೆ ಆತ್ಮಹತ್ಯೆ
ಸೋಮವಾರ ಬೆಳಗ್ಗೆ ಮಹಿಳೆಯೊಬ್ಬರು ಮೆಟ್ರೋ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ನವದೆಹಲಿಯಲ್ಲಿ ಧಾರುಣ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಮಹಿಳೆಯೊಬ್ಬರು ಮೆಟ್ರೋ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿ ಮೆಟ್ರೋದ ಹಳದಿ ಮಾರ್ಗದ ಜೋರ್ ಬಾಗ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮೆಟ್ರೋ ರೈಲು ನಿಲ್ದಾಣದಿಂದ ಹುಡಾ ಸಿಟಿಗೆ ಹೊರಡುತ್ತಿದ್ದಾಗ ಪ್ಲಾಟ್‌ಫಾರ್ಮ್‌ನಲ್ಲಿದ್ದ ಪ್ರಯಾಣಿಕರೊಬ್ಬರು ರೈಲಿನ ಮುಂಭಾಗದ ಹಳಿಗಳಿಗೆ ಹಾರಿದ್ದಾರೆ.
ರೈಲು ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದರಿಂದ ಘಟನೆಯಲ್ಲಿ ಆಕೆಯ ತಲೆಗೆ ತೀವ್ರ ಪೆಟ್ಟಾಗಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಆಕೆಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲಿ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಮೃತರಿಗೆ 50 ವರ್ಷ ವಯಸ್ಸಾಗಿದ್ದು, ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಆತ್ಮಹತ್ಯೆಯ ಹಿಂದಿನ ಕಾರಣಗಳನ್ನು ಹುಡುಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ.
ಮೃತರ ಕುಟುಂಬ ಸದಸ್ಯರ ಅನುಮತಿ ಮೇರೆಗೆ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಂದೆಡೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಕೆಲಕಾಲ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಮೆಟ್ರೊ ರೈಲು ಸಂಚಾರವನ್ನು ಮರುಸ್ಥಾಪಿಸಲಾಗಿದೆ.
Woman Jumps In Front Of Moving Metro At Jor Bagh Station Of Yellow Line Dies
Follow us On
Google News |