Welcome To Kannada News Today

ಯೂಟ್ಯೂಬ್ ಚಾನೆಲ್ ವೀಡಿಯೋ ಚಿತ್ರೀಕರಣಕ್ಕೆ ಹೋಗಿ ಬರುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಐವರು ಸಾವು

ವಿಡಿಯೋ ಚಿತ್ರೀಕರಣಕ್ಕೆ ಹೋಗಿ ಬರುತ್ತಿದ್ದಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 

ದಿಸ್ಪುರ್: ವಿಡಿಯೋ ಚಿತ್ರೀಕರಣಕ್ಕೆ ಹೋಗಿ ಬರುತ್ತಿದ್ದಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ದರಂಗ್ ಜಿಲ್ಲೆಯ ದಲ್ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಬೆಸಿಮರಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ-15ರಲ್ಲಿ ಕಾರು ಮತ್ತು ಟ್ರಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿ ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ತೇಜ್‌ಪುರದಿಂದ ಮಂಗಳದೋಯ್ ಕಡೆಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಮೃತರನ್ನು ಫರೀದುಲ್ ಇಸ್ಲಾಂ, ಆಜಾದ್ ಅಲಿ, ಇಬ್ರಾಹಿಂ ಅಲಿ, ಮಂಜುವಾರ ಬೇಗಂ ಮತ್ತು ಸಾನಿಯಾ ಅಖ್ತರ್ ಎಂದು ಗುರುತಿಸಲಾಗಿದೆ. ಅವರು ದರ್ರಾಂಗ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಸಾನಿಯಾ ಅಖ್ತರ್ ಅವರ ಯೂಟ್ಯೂಬ್ ಚಾನೆಲ್ ವೀಡಿಯೋ ಚಿತ್ರೀಕರಣಕ್ಕಾಗಿ ತಂಡವು ರೌತಾ ಪ್ರದೇಶಕ್ಕೆ ತೆರಳಿ ಹಿಂತಿರುಗುತ್ತಿದ್ದಾಗ ಬೇಸಿಮರಿ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ.

ಗಾಯಾಳುಗಳಿಗೆ ಮಂಗಳದೈ ಸಿವಿಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಗುವಾಹಟಿ ವೈದ್ಯಕೀಯ ಆಸ್ಪತ್ರೆಗೆ ರವಾನಿಸಲಾಗಿದೆ.