ಹಾಸನ ಜಿಲ್ಲೆಯಲ್ಲಿಂದು ಹೊಸದಾಗಿ 27 ಕೋವಿಡ್ ಪ್ರಕರಣಗಳು ಪತ್ತೆ

ಜಿಲ್ಲೆಯಲ್ಲಿಂದು ಹೊಸದಾಗಿ 27 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 27,538ಕ್ಕೆ ಏರಿಕೆಯಾಗಿದೆ

(Kannada News) : ಹಾಸನ : ಜಿಲ್ಲೆಯಲ್ಲಿಂದು ಹೊಸದಾಗಿ 27 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 27,538ಕ್ಕೆ ಏರಿಕೆಯಾಗಿದೆ.

ಜಿಲ್ಲಾಸ್ಪತ್ರೆಯಲ್ಲಿ 288 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 26,794 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 17 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಕೋವಿಡ್‍ನಿಂದ ಒಂದು ಸಾವು ಸಂಭವಿಸಿದ್ದು. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 456ಮಂದಿ ಸಾವನ್ನಪ್ಪಿದಾರೆ.

ಇಂದು ಪತ್ತೆಯಾದ 27 ಕೊರೋನಾ ಸೋಂಕು ಪ್ರಕರಣಗಳಲ್ಲಿ 07 ಮಂದಿ ಹಾಸನ ತಾಲ್ಲೂಕು, ಅರಸೀಕೆರೆ ತಾಲ್ಲೂಕಿನಲ್ಲಿ 06 ಮಂದಿ, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 05 ಮಂದಿ, ಸಕಲೇಶಪುರ ತಾಲ್ಲೂಕಿನಲ್ಲಿ 02 ಮಂದಿ, ಅರಕಲಗೂಡು ತಾಲ್ಲೂಕಿನಲ್ಲಿ 05 ಮಂದಿಗೆ, ಬೇಲೂರು, ಹೊಳೆನರಸೀನಪುರ ತಾಲೂಕಿನಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಅವರು ತಿಳಿಸಿದ್ದಾರೆ.

Web Title : 27 new cases of Covid detected in Hassan district

Scroll Down To More News Today