ಶಾಸಕ ಶರತ್ ಬಚ್ಚೇಗೌಡ ಸೇರಿ 15 ಮಂದಿ ವಿರುದ್ಧ FIR ದಾಖಲು !

(Kannada News) : ಹೊಸಕೋಟೆ : ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡೆಸಿದ ಆರೋಪದ ಮೇಲೆ ಶಾಸಕ ಶರತ್ ಬಚ್ಚೇಗೌಡ ಸೇರಿ 15 ಜನರ ವಿರುದ್ಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಗರದಲ್ಲಿ ಸಚಿವ ಎಂಟಿಬಿ ನಾಗರಾಜ್ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಸಮಯದಲ್ಲಿ ಶಿಷ್ಟಾಚಾರ ಉಲ್ಲಂಘನೆ  ಎಂಬ ಆರೋಪವನ್ನು ಶಾಸಕ ಬಚ್ಚೇಗೌಡ ಬೆಂಬಲಿಗರು ಮಾಡಿ, ಗಲಾಟೆ ನಡೆಸಿದ್ದರು. ಈ ವೇಳೆ ಪೊಲೀಸರು ಹಾಗೂ ಬೆಂಲಿಗರ ನಡುವೆ ಮಾತಿನ ಚಕಮಕಿ ನಡೆದಿತ್ತು.

MLA Sharath Bachegowda
MLA Sharath Bachegowda

ಜನರನ್ನು ಚದುರಿಸಲು ಪೊಲೀಸರು ಲಾಠಿ ಪ್ರವಾಹ ನಡೆಸಿದ್ದರು.  ಹೀಗಾಗಿ ಶರತ್ ಬಚ್ಚೇಗೌಡ ಬೆಂಬಲಿಗರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.  ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಮತ್ತು ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದ ಹಿನ್ನೆಲೆಯಲ್ಲಿ ಶಾಸಕರು ಸೇರಿದಂತೆ 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

Web Title : FIR registered against 15 persons including MLA Sharath Bachegowda

Scroll Down To More News Today