ನವಲಗುಂದ ಪುರಸಭೆಗೆ ಚುನಾವಣೆ: ಸಭೆ ನಡೆಸಿದ ಕಾಂಗ್ರೆಸ್

ನ 4ರಂದು ನಡೆಯಲಿರುವ ನವಲಗುಂದ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ

( Kannada News Today ) : ಹುಬ್ಬಳ್ಳಿ : ನ 4ರಂದು ನಡೆಯಲಿರುವ ನವಲಗುಂದ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಅಂಗವಾಗಿ ಹುಬ್ಬಳ್ಳಿಯ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಅನೀಲ್ ಕುಮಾರ್ ಪಾಟೀಲ್ ಅಧ್ಯಕ್ಷತೆಯಲ್ಲಿ ನವಲಗುಂದ ಪುರಸಭೆ ಸದಸ್ಯರು ಹಾಗೂ ಮುಖಂಡರೊಂದಿಗೆ ಸಭೆ ನಡೆಸಿ ಚುನಾವಣಾ ರೂಪುರೇಷೆ ಬಗ್ಗೆ ಚರ್ಚೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ಎಲ್ಲ ಸದಸ್ಯರು ಒಮ್ಮತದಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಇರುತ್ತೇವೆ ಮತ್ತು ಅಧಿಕಾರಕ್ಕಾಗಿ ಕೋಮುವಾದಿ ಪಕ್ಷವಾದ ಬಿಜೆಪಿಯೊಂದಿಗೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಪಾದಿಸಿದರು.
ಸಭೆಯಲ್ಲಿ ಮಾಜಿ ಸಚಿವರಾದ ಕೆ. ಎನ್.ಗಡ್ಡಿ, ಧಾರವಾಡ ಗ್ರಾಮೀಣ ಜಿಲ್ಲಾ ಯವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ನವಲಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವರ್ಧಮಾನ್ ಹಿರೇಗೌಡರ್ ಹಾಗೂ ಕಾಂಗ್ರೆಸ್ ಪಕ್ಷದ ಪುರಸಭೆಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.

Scroll Down To More News Today