ಮನೆ ಇಲ್ಲದವರಿಗೆ ಸ್ವಂತ ಮನೆ ಕಟ್ಟಲು ಸರ್ಕಾರದಿಂದ 1.5 ಲಕ್ಷ ಸಹಾಯಧನ! ಅರ್ಜಿ ಸಲ್ಲಿಸಿ
ದೇಶದಲ್ಲಿ ಇರುವ ಬಡವರಿಗೆ ಅದರಲ್ಲೂ ಗ್ರಾಮೀಣ ಭಾಗದಲ್ಲಿ (rural area) ವಾಸಿಸುವ ಜನರಿಗೆ ಸ್ವಂತ ಮನೆ (Own House) ಇಲ್ಲದೆ ಇದ್ದರೆ ಸ್ವಂತ ಸೂರು ನಿರ್ಮಾಣ ಮಾಡಿಕೊಳ್ಳಲು ಸರ್ಕಾರ ವಸತಿ ಯೋಜನೆಗಳನ್ನು (government housing project) ಜಾರಿಗೆ ತಂದಿದೆ
ಈ ಯೋಜನೆಯ ಅಡಿಯಲ್ಲಿ ಸರ್ಕಾರದಿಂದ ಹೆಚ್ಚಿನ ಪ್ರಯೋಜನಗಳನ್ನು ಪಡೆದುಕೊಂಡು ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಿದೆ.
ವೋಟರ್ ಐಡಿ ಇರುವ ಎಲ್ಲರಿಗೂ ರಾತ್ರೋರಾತ್ರಿ ಹೊಸ ರೂಲ್ಸ್; ಇನ್ನೊಂದು ಆದೇಶ
ಪ್ರಧಾನ ಮಂತ್ರಿ ಆವಾಸ್ ಯೋಜನೆ! (Pradhanmantri aawas Yojana – PMAY)
ಈ ಹಿಂದೆ ಇಂದಿರಾ ಗಾಂಧಿ ಆವಾಸ್ ಯೋಜನೆ ಎಂದು ಇರುವ ಯೋಜನೆಯನ್ನು 2016ರಲ್ಲಿ ಮರುನಾಮಕರಣ ಮಾಡಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು ಹೆಸರಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ಸುಮಾರು 2.95 ಕೋಟಿ ಮನೆ ನಿರ್ಮಾಣ ಮಾಡುವ ಉದ್ದೇಶ ಕೇಂದ್ರ ಸರ್ಕಾರದ್ದು.
ಈಗಾಗಲೇ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ 2.50 ಕೋಟಿ ಮನೆಗಳ ನಿರ್ಮಾಣ ಮಾಡಲಾಗಿದೆ, ಇನ್ನು ಉಳಿದ ಗುರಿಯನ್ನು 2024 ಮಾರ್ಚ್ ಅಂತ್ಯದ ಒಳಗೆ ಸಾಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಅರ್ಜಿ ಸಲ್ಲಿಸಿದರೆ ನೀವು ಕೂಡ ಮನೆ ಪಡೆದುಕೊಳ್ಳಬಹುದು.
ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಪ್ರಯೋಜನಗಳು! (Benefits of PMAY)
ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಗ್ರಾಮೀಣ ಹಾಗೂ ನಗರ ಎಂದು ಎರಡು ವಿಭಾಗಗಳನ್ನ ಮಾಡಲಾಗಿದೆ, ಗ್ರಾಮೀಣ ಭಾಗದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಬಯಸುವವರಿಗೆ ಸಿಗುವ ಮೊತ್ತ ನೋಡುವುದಾದರೆ, ಬಯಲು ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳುವುದಿದ್ದರೆ 1.2 ಲಕ್ಷ ರೂಪಾಯಿ ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ 1.3 ಲಕ್ಷ ರೂಪಾಯಿಗಳನ್ನು ಸರ್ಕಾರ ನೀಡಲಿದೆ.
ಉಚಿತ ಮನೆ ಸ್ಕೀಮ್; ಸರ್ಕಾರದ ವಸತಿ ಯೋಜನೆಗೆ ಈ ರೀತಿ ಅರ್ಜಿ ಸಲ್ಲಿಸಿ! ಇಲ್ಲಿದೆ ಮಾಹಿತಿ
ರಾಜ್ಯ ಮತ್ತು ಕೇಂದ್ರಾಡಳಿತಗಳಲ್ಲಿ ಮನೆ ನಿರ್ಮಾಣ!
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಂದು ಘಟಕವಾಗಿ ನಿರ್ಧರಿಸಿ ಕೇಂದ್ರ ಸರ್ಕಾರದಿಂದ ಈ ಭಾಗದಲ್ಲಿ ಮನೆ ನಿರ್ಮಾಣಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಆಯಾ ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆಡಳಿತದಿಂದ ಹಣ ವರ್ಗಾವಣೆ ಮಾಡಲಾಗುತ್ತಿದ್ದು ಆಯಾ ಗ್ರಾಮ ಪಂಚಾಯತ್ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ.
2022 23ನೇ ಸಾಲಿನಲ್ಲಿ ಕೇಂದ್ರದಿಂದ 1,60,853.38 ಹಣ ವಸತಿ ನಿರ್ಮಾಣಕ್ಕಾಗಿ ಬಿಡುಗಡೆ ಮಾಡಲಾಗಿದೆ. PMAY -G ಅಧಿಕೃತ ವೆಬ್ಸೈಟ್ ಗೆ ಹೋಗಿ ವಸತಿ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
1.5 lakh subsidy from Modi government to build own house