Maharashtra Accident: ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ, 10 ಮಂದಿ ಸಾಯಿಬಾಬಾ ಭಕ್ತರು ಸಾವು

Maharashtra Accident: ಸಾಯಿಬಾಬಾ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಗೆ ಟ್ರಕ್‌ ಡಿಕ್ಕಿ ಹೊಡೆದು ಹತ್ತು ಮಂದಿ ಸಾಯಿಬಾಬಾ ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ

- - - - - - - - - - - - - Story - - - - - - - - - - - - -

Maharashtra Accident (Kannada News): ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಸಾಯಿಬಾಬಾ ಭಕ್ತರು (Sai Baba devotees )ಪ್ರಯಾಣಿಸುತ್ತಿದ್ದ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಹತ್ತು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಾಸಿಕ್-ಶಿರಡಿ ರಾಷ್ಟ್ರೀಯ ಹೆದ್ದಾರಿಯ ಪಟಾರೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ.

ಸ್ಥಳೀಯ ಪೊಲೀಸರ ಪ್ರಕಾರ, ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತರಲ್ಲಿ ಏಳು ಮಹಿಳೆಯರು, ಇಬ್ಬರು ಮಕ್ಕಳು ಹಾಗೂ ಓರ್ವ ಪುರುಷ ಸೇರಿದ್ದಾರೆ. 17ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ (Bus and Truck Accident). ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಪಘಾತದ ವೇಳೆ ಬಸ್‌ನಲ್ಲಿ 45 ಮಂದಿ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: News Updates: ಇಂದಿನ ಕನ್ನಡ ಸುದ್ದಿ ಮುಖ್ಯಾಂಶಗಳು, ಲೈವ್ ನ್ಯೂಸ್ ಪ್ರಸಾರ 14 01 2023

10 Dead And Many Injured After Bus Carrying Pilgrims Collides With Truck in Maharashtra

ವಿಷಯ ತಿಳಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ರೂ.5 ಲಕ್ಷಗಳ ಪರಿಹಾರ ಮೊತ್ತವನ್ನು ಘೋಷಿಸಲಾಗಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಸೂಚಿಸಲಾಗಿದೆ

10 Dead And Many Injured After Bus Carrying Pilgrims Collides With Truck in Maharashtra

Related Stories