LIVE News Updates: ಭಾರಿ ಎನ್‌ಕೌಂಟರ್, ಹತ್ತು ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರಗಳು ವಶ
Live News: ಎನ್‌ಕೌಂಟರ್ ಪ್ರದೇಶದಿಂದ 3 ಸ್ವಯಂಚಾಲಿತ ಬಂದೂಕುಗಳು ಮತ್ತು ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ
Live Updates: ಛತ್ತೀಸ್‌ಗಢ ರಾಜ್ಯದಲ್ಲಿ ಮತ್ತೊಮ್ಮೆ ಭಾರೀ ಎನ್‌ಕೌಂಟರ್ ನಡೆದಿದೆ. ಶುಕ್ರವಾರ ಬೆಳಗ್ಗೆ ಸುಕ್ಮಾ ಜಿಲ್ಲೆಯಲ್ಲಿ ಜಿಲ್ಲಾ ಮೀಸಲು ಪಡೆ ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ 10 ಮಾವೋವಾದಿಗಳು ಹತರಾಗಿದ್ದಾರೆ.
ಶುಕ್ರವಾರ ಮುಂಜಾನೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಖಚಿತಪಡಿಸಿದ್ದಾರೆ. ಎನ್‌ಕೌಂಟರ್ ಪ್ರದೇಶದಿಂದ ಮೂರು ಸ್ವಯಂಚಾಲಿತ ಬಂದೂಕುಗಳು ಮತ್ತು ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.