ಶಾಲಾ ಮಕ್ಕಳಿಗೆ ಕಚ್ಚಿದ ಹುಚ್ಚು ನಾಯಿ, 10 ಮಂದಿಗೆ ಗಾಯ..!

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಶಾಲೆಗೆ ಹೋಗುತ್ತಿದ್ದ ಮಕ್ಕಳ ಗುಂಪಿನ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದೆ.

ಲಕ್ನೋ: ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಶಾಲೆಗೆ ಹೋಗುತ್ತಿದ್ದ ಮಕ್ಕಳ ಗುಂಪಿನ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದೆ. ದಾಳಿಯಲ್ಲಿ ಹತ್ತು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಶಾಮ್ಲಿ ಜಿಲ್ಲೆಯ ಕೈರಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಜಹಾನ್‌ಪುರ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳಿಗೆ ಗ್ರಾಮದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸಾದಿಕ್ (4), ಮಹಿಕ್ (4), ಇನ್ಶಾ (10) ಮತ್ತು ಶ್ಯಾಮ್ (7) ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ, ಮಕ್ಕಳ ಮೇಲೆ ದಾಳಿ ಮಾಡಿ ಕಚ್ಚಿದ ಹುಚ್ಚು ನಾಯಿಯನ್ನು ಗ್ರಾಮಸ್ಥರು ಬೆನ್ನಟ್ಟಿ ಕೊಂದು ಹಾಕಿದ್ದಾರೆ.

ಮಕ್ಕಳು ಶಾಲೆಗೆ ಹೋಗುವಾಗ ಹುಚ್ಚು ನಾಯಿ ಏಕಾ ಏಕಿ ದಾಳಿ ಮಾಡಿದೆ ಎಂದು ತಿಳಿದುಬಂದಿದೆ, ಘಟನೆಯ ನಂತರ ಆ ನಾಯಿಯನ್ನು ಹುಡುಕಿ ಸಾರ್ವಜನಿಕರು ಕೊಂದಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today