ಆಸ್ಪತ್ರೆಯಲ್ಲಿ ಬೆಂಕಿ ಅವಘಡ, ಮೃತರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರ

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.. ಮೃತರ ಕುಟುಂಬಗಳಿಗೆ ಮಹಾರಾಷ್ಟ್ರ ಸರ್ಕಾರ ₹ 5 ಲಕ್ಷ ಪರಿಹಾರ ಘೋಷಿಸಿದೆ. ತನಿಖೆಗೆ ಆದೇಶಿಸಿದ್ದಾರೆ.

ಪುಣೆ : ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಲ್ಲಿ ಹನ್ನೊಂದು ಕರೋನಾ ರೋಗಿಗಳು ಸಾವನ್ನಪ್ಪಿದ್ದಾರೆ.

ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಆ ಸಮಯದಲ್ಲಿ ಸುಮಾರು 20 ಕೋವಿಡ್ ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಅಪಘಾತ ಸಂಭವಿಸಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಆದರೆ ಆಗಾಗಲೇ 10 ಮಂದಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.. ಮೃತರ ಕುಟುಂಬಗಳಿಗೆ ಮಹಾರಾಷ್ಟ್ರ ಸರ್ಕಾರ ₹ 5 ಲಕ್ಷ ಪರಿಹಾರ ಘೋಷಿಸಿದೆ. ತನಿಖೆಗೆ ಆದೇಶಿಸಿದ್ದಾರೆ. ಘಟನೆಯ ಬಗ್ಗೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಆಘಾತ ವ್ಯಕ್ತಪಡಿಸಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today