ರಾಯ್‌ಪುರದಲ್ಲಿ ಭೀಕರ ಅಪಘಾತ: 13 ಮಂದಿ ಸಾವು

ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯಲ್ಲಿ ಲಾರಿ ಮತ್ತು ಟ್ರೇಲರ್ ಡಿಕ್ಕಿಯಾದ ಪರಿಣಾಮ 13 ಮಂದಿ ಮೃತಪಟ್ಟಿದ್ದು, ಗಾಯಗೊಂಡ 11 ಮಂದಿಗೆ ರಾಯ್‌ಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

  • ಲಾರಿ-ಟ್ರೇಲರ್ ಮುಖಾಮುಖಿ ಡಿಕ್ಕಿ
  • 13 ಮಂದಿ ಸ್ಥಳದಲ್ಲೇ ಸಾವಿಗೀಡಾದ ದುರ್ಘಟನೆ
  • ಗಾಯಾಳುಗಳಿಗೆ ತಕ್ಷಣವೇ ಆಸ್ಪತ್ರೆಯಲ್ಲಿ ಚಿಕಿತ್ಸೆ

ರಾಯ್‌ಪುರದ ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (road accident) 13 ಜನರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರಲ್ಲಿ 4 ಮಕ್ಕಳು ಮತ್ತು 9 ಮಹಿಳೆಯರು ಇದ್ದಾರೆ ಎಂದು ವರದಿಯಾಗಿದೆ.

ಚಟೌಡ್ ಗ್ರಾಮದ ಕುಟುಂಬವೊಂದು ಬನ್ಸಾರಿ ಗ್ರಾಮದಲ್ಲಿ ನಡೆದ ಕುಟುಂಬ ಸಮಾರಂಭಕ್ಕೆ ಹಾಜರಾಗಿ, ನಂತರ ಲಾರಿಯಲ್ಲಿ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಸರಗಾಂವ್ ಬಳಿ ಟ್ರೇಲರ್‌ಗೆ (trailer-truck collision in Raipur) ಭೀಕರವಾಗಿ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ.

ಅಪಘಾತದ ಮಾಹಿತಿ ದೊರೆತ ತಕ್ಷಣವೇ ರಾಯ್‌ಪುರ ಜಿಲ್ಲಾ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಸ್ಥಳೀಯರು ಹಾಗೂ ಅಧಿಕಾರಿಗಳ ಸಹಾಯದಿಂದ ಡಾ. ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಗೆ (hospital) ದಾಖಲಿಸಲಾಯಿತು. ಗಾಯಾಳುಗಳಿಗೆ ತಕ್ಷಣವೇ ಚಿಕಿತ್ಸೆ ನೀಡಲಾಗಿದೆ.

ಜಿಲ್ಲಾಧಿಕಾರಿ ಗೌರವ್ ಸಿಂಗ್ ಹಾಗೂ ಎಸ್‌ಪಿ ಲಾಲ್ ಉಮ್ಮದ್ ಸಿಂಗ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ಹೃದಯವಿದ್ರಾವಕ ದೃಶ್ಯವಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದರು.

ಘಟನೆ ಕುರಿತು ರಾಯ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯದಲ್ಲಿಯೇ ತನಿಖೆ ಆರಂಭಿಸಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.

13 Dead, 11 Injured in Raipur Truck Collision

Related Stories