ಉದಯಪುರ ಹತ್ಯೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್, 16 ವರ್ಷದ ಬಾಲಕಿಗೆ ಕೊಲೆ ಬೆದರಿಕೆ
ರಾಜಸ್ಥಾನದ ಉದಯಪುರ ಹತ್ಯೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ 16 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಗಳು ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ರಾಜಸ್ಥಾನದ ಉದಯಪುರ ಹತ್ಯೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ 16 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಗಳು ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ದಕ್ಷಿಣ ಮುಂಬೈನ ಬಾಲಕಿಯೊಬ್ಬಳು ವಿಪಿ ರೋಡ್ ಪೊಲೀಸ್ ಠಾಣೆಗೆ ತೆರಳಿ ತಾನು ಮಾಡಿದ್ದ ಪೋಸ್ಟ್ ತೋರಿಸಿ ಬೆದರಿಕೆ ಬರುತ್ತಿದೆ ಎಂದು ದೂರು ನೀಡಿದ್ದಾಳೆ.
“ಕನ್ಹಯಾ ಲಾಲ್ ಎಂಬ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಎಂದು ಹುಡುಗಿ ತನ್ನ ಫೇಸ್‌ಬುಕ್ ವಾಲ್‌ನಲ್ಲಿ ಕೆಲವು ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದಾಳೆ. ಆ ನಂತರ ಆಕೆಗೆ ಅಪರಿಚಿತ ವ್ಯಕ್ತಿಯಿಂದ ವಾಟ್ಸಾಪ್ ಕರೆ ಬಂದಿದ್ದು, ಆ ಪೋಸ್ಟ್‌ನಲ್ಲಿ ಕಾಮೆಂಟ್ ಮಾಡಿದ್ದಕ್ಕಾಗಿ ಆಕೆಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.
ಆಕೆಯ ದೂರಿನ ಮೇರೆಗೆ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕನ್ಹಯ್ಯಾ ಲಾಲ್ ಹತ್ಯೆ
ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಕಾಮೆಂಟ್ ಮಾಡಿದ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ರಾಜಸ್ಥಾನದ ಉದಯಪುರದ ಕನ್ಹಯ್ಯಾ ಎಂಬ ವ್ಯಕ್ತಿ ಜೂನ್ 28 ರಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾನೆ. ನಂತರ ಅಂಗಡಿಯಲ್ಲಿದ್ದಾಗ ಇಬ್ಬರು ದುಷ್ಕರ್ಮಿಗಳು ಗ್ರಾಹಕರ ರೂಪದಲ್ಲಿ ಬಂದು ಕೊಲೆ ಮಾಡಿದ್ದಾರೆ.
ಇದೇ ಕಾರಣಕ್ಕಾಗಿ ಜೂನ್ 21 ರಂದು ಅಮರಾವತಿಯಲ್ಲಿ ಉಮೇಶ್ ಕೋಲ್ಹೆ ಅವರನ್ನು ಕೊಲೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
16 Year Old Girl Gets Death Threat Over Facebook Post On Udaipur Tailor Killing
Follow us On
Google News |