ನವಿ ಮುಂಬೈನಲ್ಲಿ ಅಕ್ರಮವಾಗಿ ನೆಲೆಸಿದ್ದ 18 ಬಾಂಗ್ಲಾದೇಶೀಯರ ಬಂಧನ
ಕಳೆದ ಒಂದು ವರ್ಷದಿಂದ ವೀಸಾ ಮತ್ತು ಪಾಸ್‌ಪೋರ್ಟ್ ಇಲ್ಲದೇ ಈ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು 18 ಮಂದಿಯನ್ನು ಬಂಧಿಸಿದ್ದಾರೆ.
ಮುಂಬೈ: ನವಿ ಮುಂಬೈನ ಕನ್ಸೋಲಿ ಪ್ರದೇಶದ ಕಟ್ಟಡವೊಂದರಲ್ಲಿ ಬಾಂಗ್ಲಾದೇಶದಿಂದ ಕೆಲವರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಹೋಗುತ್ತಿದ್ದಾರೆ ಎಂದು ಪೊಲೀಸರಿಗೆ ಸುಳಿವು ಸಿಕ್ಕಿತು.
ಪೊಲೀಸರು ಅಲ್ಲಿಗೆ ತೆರಳಿ ಅನುಮಾನಾಸ್ಪದವಾಗಿ 18 ಮಂದಿಯನ್ನು ಬಂಧಿಸಿದ್ದಾರೆ. ಇವರಲ್ಲಿ 10 ಮಹಿಳೆಯರು ಮತ್ತು 8 ಪುರುಷರು.
ಕಳೆದ ಒಂದು ವರ್ಷದಿಂದ ವೀಸಾ ಮತ್ತು ಪಾಸ್‌ಪೋರ್ಟ್ ಇಲ್ಲದೇ ಈ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು 18 ಮಂದಿಯನ್ನು ಬಂಧಿಸಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
18 Bangladeshis who were staying illegally in Navi Mumbai arrested
Follow us On
Google News |