24 ಗಂಟೆಯಲ್ಲಿ ಎರಡು ಎನ್‌ಕೌಂಟರ್.. ಮೂವರು ಉಗ್ರರ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಕುಲ್ಗಾಮ್ ಜಿಲ್ಲೆಯ ಎರಡು ವಿಭಿನ್ನ ಪ್ರದೇಶಗಳಲ್ಲಿ ಎನ್‌ಕೌಂಟರ್‌ಗಳು ನಡೆದಿವೆ. ಬಟ್ಪೋರಾ ಮತ್ತು ಅಹ್ವಾತು ಪ್ರದೇಶಗಳಲ್ಲಿ ನಡೆದ ಈ ಎನ್‌ಕೌಂಟರ್‌ಗಳಲ್ಲಿ ಒಟ್ಟು ಮೂವರು ಭಯೋತ್ಪಾದಕರು ಹತರಾಗಿದ್ದಾರೆ.
ಬಟ್ಪೋರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್‌ಗೆ ಸೇರಿದ ಪಾಕಿಸ್ತಾನಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಈತ ಕಾಶ್ಮೀರ ಪ್ರದೇಶದಲ್ಲಿ ಹಲವು ಭಯೋತ್ಪಾದನಾ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅಹ್ವಾತು ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್‌ಗೆ ಸೇರಿದ ಸ್ಥಳೀಯ ಭಯೋತ್ಪಾದಕರು ಹತರಾಗಿದ್ದಾರೆ.
ಎನ್‌ಕೌಂಟರ್ ಸ್ಥಳಗಳಿಂದ ಭಾರೀ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಹೆಚ್ಚುವರಿ ಡಿಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಪ್ರಸ್ತುತ ಕುಲ್ಗಾಮ್ ಜಿಲ್ಲೆಯಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಯೋತ್ಪಾದಕರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.
2 Encounters Broke Out In The Kulgam District Three Terrorists Killed
ಸದ್ದಿಲ್ಲದೇ ನಡೀತಿದೆ ನಟಿ ಅನುಷ್ಕಾ ಶೆಟ್ಟಿ ಮದುವೆ ಸಿದ್ಧತೆ, ಆಂಧ್ರ ಬ್ಯುಸಿನೆಸ್ ಮ್ಯಾನ್ ಜೊತೆ ಗಟ್ಟಿಮೇಳ