ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಎನ್‌ಕೌಂಟರ್! ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಭಯೋತ್ಪಾದನೆ ಮುಂದುವರಿದಿದೆ. ಇತ್ತೀಚಿನ ಎನ್‌ಕೌಂಟರ್ (Encounter) ಶನಿವಾರ ಬೆಳಗ್ಗೆ ಅನಂತನಾಗ್ ಜಿಲ್ಲೆಯಲ್ಲಿ ನಡೆದಿದೆ. ಭದ್ರತಾ ಪಡೆಗಳ (Security Forces) ಗುಂಡಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ.
ಹಲ್ಕನ್ ಗಲಿ ಪ್ರದೇಶದಲ್ಲಿ ಭಯೋತ್ಪಾದಕರು ಅವಿತಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಮತ್ತು ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಈ ನಡುವೆ ಶುಕ್ರವಾರ ಕಾಶ್ಮೀರ ಕಣಿವೆಯಲ್ಲಿ ಉತ್ತರ ಪ್ರದೇಶದ ವಲಸೆ ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಗುಂಡಿನ ದಾಳಿಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶ್ರೀನಗರದ ಜೆವಿಸಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದ ಆತಂಕಗೊಂಡಿರುವ ಭದ್ರತಾ ಪಡೆಗಳು ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ಹುಡುಕಾಟದಲ್ಲಿ ತೊಡಗಿವೆ.
ಖನ್ಯಾರ್ ಪ್ರದೇಶದಲ್ಲಿ ಗುಂಡಿನ ದಾಳಿ
ಮತ್ತೊಂದೆಡೆ, ಶನಿವಾರ ಬೆಳಿಗ್ಗೆಯಿಂದ, ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ಗುಂಡಿನ ಸದ್ದು ಕೇಳುತ್ತಿದೆ. ಇಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
2 Terrorists Killed In Encounter With Security Forces In Jammu And Kashmir Anantnag
Our Whatsapp Channel is Live Now 👇