ತಮಿಳುನಾಡಿನ ಖಾಸಗಿ ಶಾಲೆಯಲ್ಲಿ 25 ವಿದ್ಯಾರ್ಥಿಗಳಿಗೆ ಕೊರೊನಾ

ಖಾಸಗಿ ಶಾಲೆಯ 25 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಕರೋನಾ ಪರೀಕ್ಷೆ ನಡೆಸಲಾಗಿದ್ದು, 25 ಮಂದಿ ಪಾಸಿಟಿವ್ ಆಗಿದೆ. 

ಚೆನ್ನೈ: ಖಾಸಗಿ ಶಾಲೆಯ 25 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಕರೋನಾ ಪರೀಕ್ಷೆ ನಡೆಸಲಾಗಿದ್ದು, 25 ಮಂದಿ ಪಾಸಿಟಿವ್ ಆಗಿದೆ.

ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರು ಮನೆಯಲ್ಲೇ ಐಸೋಲೇಷನ್‌ನಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಭಿನ್ನ ಕಾಳಜಿಯ ಹಿನ್ನೆಲೆಯಲ್ಲಿ ಜೀನೋಮಿಕ್ ಸೀಕ್ವೆನ್ಸಿಂಗ್‌ಗಾಗಿ ಅವರ ಮಾದರಿಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಖಾಸಗಿ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ, ಇತರ ವಿದ್ಯಾರ್ಥಿಗಳ ಕರೋನಾ ಪರೀಕ್ಷೆ ಸಹ ಮಾಡಲಾಗುವುದು. ಮಂಜಾಗುರೂಕತೆಯಿಂದ ಶಾಲೆಯನ್ನು ಒಂದು ವಾರ ಮುಚ್ಚಲಾಗುವುದು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today