ಅಸ್ಸಾಂನಲ್ಲಿ ಪ್ರವಾಹ ಪೀಡಿತ ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ 3 ಮಕ್ಕಳು ನಾಪತ್ತೆ
ಅಸ್ಸಾಂನಲ್ಲಿ ಭಾರೀ ಮಳೆ ಮತ್ತು ಪ್ರವಾಹ, ಅಸ್ಸಾಂನಲ್ಲಿ ದೋಣಿ ಮಗುಚಿ ಮೂವರು ಮಕ್ಕಳು ನಾಪತ್ತೆ
ಗುವಾಹಟಿ: ಕಳೆದ ಕೆಲವು ದಿನಗಳಿಂದ ಅಸ್ಸಾಂನಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಲಕ್ಷಾಂತರ ಜನರು ತೊಂದರೆಗೀಡಾಗಿದ್ದಾರೆ. ಅವರನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಕ್ರಿಯವಾಗಿ ತೊಡಗಿಸಿಕೊಂಡಿದೆ.
ರಾಜ್ಯದ ಹೊಜೈ ಜಿಲ್ಲೆಯ ಇಸ್ಲಾಂಪುರ ಗ್ರಾಮದಿಂದ 24 ಮಂದಿ ಪ್ರವಾಹ ಸಂತ್ರಸ್ತರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ತೀವ್ರಗೊಂಡಿದ್ದು, ಉಳಿದವರನ್ನೆಲ್ಲ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಸ್ಸಾಂನಲ್ಲಿ ಈ ವರ್ಷ 28 ಜಿಲ್ಲೆಗಳಲ್ಲಿ 18.95 ಲಕ್ಷ ಜನರು ಪ್ರವಾಹ ಮತ್ತು ಭೂಕುಸಿತದಿಂದ ಸಂತ್ರಸ್ತರಾಗಿದ್ದಾರೆ. ಅಲ್ಲದೆ, 55 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದಾಗಿ ಅಲ್ಲಿನ ಜನರ ಸಹಜ ಸ್ಥಿತಿ ಸಂಪೂರ್ಣ ಅಸ್ತವ್ಯಸ್ತವಾಗಿದೆ.
3 Children Missing As Boat Carrying Flood-Affected People Capsizes In Assam
Follow Us on : Google News | Facebook | Twitter | YouTube