ಮನೆಯಲ್ಲಿ ಸ್ಫೋಟ.. ಮೂವರು ಸಾವು, ಹಲವರಿಗೆ ಗಾಯ
ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಕುಸಿದಿದೆ. ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಕೋಲ್ಕತ್ತಾ: ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಿಂದಾಗಿ ಮನೆಯ ಮೇಲ್ಛಾವಣಿ ಕುಸಿದಿದೆ. ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮನೆಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ರಾತ್ರಿ ಖಯರ್ತಲಾ ಪ್ರದೇಶದ ಮನೆಯೊಂದರಲ್ಲಿ ಸ್ವದೇಶಿ ಬಾಂಬ್‌ಗಳು ಸ್ಫೋಟಗೊಂಡಿವೆ. ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಕುಸಿದಿದೆ. ರಾತ್ರಿ ಸ್ಫೋಟದ ಸದ್ದು ಕೇಳಿ ಸ್ಥಳೀಯರು ಭಯಭೀತರಾಗಿದ್ದರು.
ಈ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರನ್ನು ಮಾಮುನ್ ಮೊಲ್ಲಾ, ಸಕಿರುಲ್ ಸರ್ಕಾರ್ ಮತ್ತು ಮುಸ್ತಾಕಿನ್ ಶೇಖ್ ಎಂದು ಗುರುತಿಸಲಾಗಿದೆ.
ಮಾಮುನ್ ಮೊಲ್ಲಾ ಅವರ ಮನೆಯಲ್ಲಿ ಸ್ವದೇಶಿ ಬಾಂಬ್‌ಗಳನ್ನು ತಯಾರಿಸಲಾಗುತ್ತಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಹಿನ್ನಲೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದರಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
3 Dead In Blast Bombmaking Gone Wrong Suspected In West Bengal Murshidabad