ಕುಪ್ವಾರದಲ್ಲಿ ಎನ್ಕೌಂಟರ್.. ಮೂವರು ಲಷ್ಕರ್ ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಕುಪ್ವಾರ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಮೂವರು ಬಂದೂಕುಧಾರಿಗಳನ್ನು ಹತ್ಯೆಗೈದಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಕುಪ್ವಾರ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಮೂವರು ಬಂದೂಕುಧಾರಿಗಳನ್ನು ಹತ್ಯೆಗೈದಿದ್ದಾರೆ. ಜಿಲ್ಲೆಯ ಜುಮಗಂಡ್ ಗ್ರಾಮಕ್ಕೆ ಭಯೋತ್ಪಾದಕರು ನುಸುಳಿದ್ದಾರೆ ಎಂಬ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿವೆ.
ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಉಗ್ರರನ್ನು ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಸಂಘಟನೆಯ ಸದಸ್ಯರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಏತನ್ಮಧ್ಯೆ, ಬುದ್ಗಾಮ್ ಜಿಲ್ಲೆಯ ಚೌಕವೊಂದರಲ್ಲಿ ಬುಧವಾರ ರಾತ್ರಿ ಟಿವಿ ನಟಿಯೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಕಿರುತೆರೆ ನಟಿ ಅಮ್ರೀನ್ ಭಟ್ ಮತ್ತು ಅವರ ಸೋದರಳಿಯ ಫರ್ಹಾನ್ ಜುಬೇರ್ (10) ಅವರನ್ನು ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅವರ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಆಕೆ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಜುಬೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್ಕೌಂಟರ್ನಲ್ಲಿ ಮೂವರು ಪಾಕಿಸ್ತಾನಿ ಜೈಶ್-ಎ-ಮಹಮ್ಮದ್ ಉಗ್ರರು ಹತರಾಗಿದ್ದಾರೆ. ಘಟನೆಯಲ್ಲಿ ಓರ್ವ ಪೊಲೀಸ್ ಸಹ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
3 Lashkar Terrorists Neutralised In Jammu Kashmir’s Kupwara
Follow Us on : Google News | Facebook | Twitter | YouTube