ಭೀಕರ ರಸ್ತೆ ಅಪಘಾತ, ಟ್ರಕ್‌ಗೆ ಬಸ್ ಡಿಕ್ಕಿ, 30 ಮಂದಿಗೆ ಗಂಭೀರ ಗಾಯ
ಉಜ್ಜಯಿನಿಯಿಂದ ದೆಹಲಿಗೆ ಹೋಗುತ್ತಿದ್ದ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದಾರೆ.
- ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ.
- 30 ಮಂದಿ ಗಾಯಗೊಂಡಿದ್ದು, 10 ಜನರ ಸ್ಥಿತಿ ಗಂಭೀರ.
- ದಟ್ಟವಾದ ಮಂಜು ಅಪಘಾತಕ್ಕೆ ಕಾರಣ ಎಂಬ ಮಾಹಿತಿ.
ರಾಜಸ್ಥಾನದಲ್ಲಿ (Rajasthan) ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದೌಸಾ ಜಿಲ್ಲೆಯಲ್ಲಿ ಬಸ್ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದಾರೆ. ಗುರುವಾರ ಮುಂಜಾನೆ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ.
ಬಸ್ 45 ಪ್ರಯಾಣಿಕರೊಂದಿಗೆ ಉಜ್ಜಯಿನಿಯಿಂದ ದೆಹಲಿಗೆ ಹೋಗುತ್ತಿತ್ತು. ಈ ವೇಳೆ ಬಸ್ ದೌಸಾ ಜಿಲ್ಲೆಗೆ ಪ್ರವೇಶಿಸುವಾಗ ಅಪಘಾತಕ್ಕೀಡಾಗಿದೆ. ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದಾರೆ.
ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಇವರಲ್ಲಿ 10 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ದಟ್ಟವಾದ ಮಂಜಿನಿಂದಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.
30 Injured in Major Bus Accident on Delhi-Mumbai Expressway in Rajasthan