ಕೊರೊನಾ ಎರಡನೇ ಅಲೆಯಲ್ಲಿ ದೇಶಾದ್ಯಂತ 3,582 ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ದಾಖಲು !

ಕೊರೊನಾ ಎರಡನೇ ಅಲೆಯಲ್ಲಿ ದೇಶಾದ್ಯಂತ 3,582 ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. 

ನವದೆಹಲಿ: ಕೊರೊನಾ ಎರಡನೇ ಅಲೆಯಲ್ಲಿ ದೇಶಾದ್ಯಂತ 3,582 ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ಕುರಿತು ಸದಸ್ಯರೊಬ್ಬರು ಕೇಳಿದ ಪ್ರಶ್ನೆಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಲಿಖಿತ ಉತ್ತರ ನೀಡಿದರು.

ಕರೋನಾ ಎರಡನೇ ತರಂಗದಲ್ಲಿ (ಏಪ್ರಿಲ್-ಜೂನ್) 3,582 ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿದ್ದರೆ, 2020 ರಲ್ಲಿ 3,748 ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಸ್ವಲ್ಪ ಕಡಿಮೆಯಾಗಿದೆ ಎಂದು ಅವರು ತಿಳಿಸಿಸಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಈ ವಿವರಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

Follow Us on : Google News | Facebook | Twitter | YouTube