ಬಿಪಿಎಲ್ ಕಾರ್ಡ್ ದಾರರಿಗೆ ಇನ್ನೂ 5 ವರ್ಷ ಉಚಿತ ಅಕ್ಕಿ ವಿತರಣೆ; ಸರ್ಕಾರ ನಿರ್ಧಾರ

Story Highlights

ಅನ್ನಭಾಗ್ಯ ಯೋಜನೆಯ (Annabhagya Scheme) ಅಡಿಯಲ್ಲಿ ಉಚಿತ ಅಕ್ಕಿಯ (free rice) ಬದಲು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಹಣವನ್ನು ನೇರವಾಗಿ ಅವರ ಖಾತೆಗೆ (Bank Account) ಜಮಾ ಮಾಡುತ್ತಿದೆ.

ಗರೀಬ್ ಕಲ್ಯಾಣ ಯೋಜನೆ (Garib Kalyana Yojana) ಅಡಿಯಲ್ಲಿ ಬಡವರಿಗೆ ಉಚಿತ ಅಕ್ಕಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ, ಈ ಯೋಜನೆಯ ಅಡಿಯಲ್ಲಿ ಬಡತನ ರೇಖೆಗಿಂತ (below poverty line) ಕೆಳಗಿರುವವರಿಗೆ ಸರ್ಕಾರ ಉಚಿತವಾಗಿ ಪಡಿತರ ವಸ್ತುಗಳನ್ನು ನೀಡುತ್ತದೆ.

Antyodaya ಕಾರ್ಡ್ ಹೊಂದಿರುವವರಿಗೆ ಉಚಿತ ಅಕ್ಕಿ ಹಾಗೂ ಮತ್ತಿತರ ವಸ್ತುಗಳು ದೊರೆತರೆ ಬಿಪಿಎಲ್ ಕಾರ್ಡ್ (BPL Ration Card) ಹೊಂದಿರುವವರಿಗೆ ಪಡಿತರ ವಸ್ತುಗಳನ್ನು ನೀಡಲಾಗುತ್ತದೆ.

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬಳಸುವ ಎಲ್ಲರಿಗೂ ಕೇಂದ್ರ ಸರ್ಕಾರದ ಹೊಸ ನಿಯಮ

ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ! (Ration card correction)

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಗೆ (Gruha lakshmi scheme) ರೇಷನ್ ಕಾರ್ಡ್ ತಿದ್ದುಪಡಿ ಅನಿವಾರ್ಯವಾಗಿದೆ. ಮಾತ್ರವಲ್ಲದೆ ಅನ್ನಭಾಗ್ಯ ಯೋಜನೆಯ (Annabhagya Scheme) ಅಡಿಯಲ್ಲಿ ಉಚಿತ ಅಕ್ಕಿಯ (free rice) ಬದಲು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಹಣವನ್ನು ನೇರವಾಗಿ ಅವರ ಖಾತೆಗೆ (Bank Account) ಜಮಾ ಮಾಡುತ್ತಿದೆ.

ಅಗತ್ಯ ಇರುವವರು ರೇಷನ್ ಕಾರ್ಡ್ ನಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಲು ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿತ್ತು, ಈಗ ಮತ್ತೆ ಗಡುವು ವಿಸ್ತರಿಸಲಾಗಿದೆ.

ಇನ್ನು ಪಡಿತರ ತಿದ್ದುಪಡಿ ಹಾಗೂ ಹೊಸ ಪಡಿತರ ಪಡೆದುಕೊಳ್ಳುವ ಸಲುವಾಗಿ ಸಾಕಷ್ಟು ಜನರು ವಂಚನೆ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು ಆಹಾರ ಇಲಾಖೆ ಈ ವಿಚಾರದಲ್ಲಿ ಬಹಳ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ

ಯಾವುದೇ ರೀತಿಯ ವಂಚನೆ ಕಂಡು ಬಂದರೆ ಅಂತಹ ರೇಷನ್ ಕಾರ್ಡ್ ಅನ್ನು ತಕ್ಷಣವೇ ರದ್ದುಪಡಿಸಲು ನಿರ್ಧರಿಸಲಾಗಿದೆ. ಈಗಾಗಲೇ ರಾಜ್ಯ ಸರ್ಕಾರದಲ್ಲಿ 2.93 ಲಕ್ಷ ಪಡಿತರ ಚೀಟಿ ಅರ್ಜಿಗಳು ಇದ್ದು ಅವುಗಳನ್ನು ಸದ್ಯದಲ್ಲೇ ಪರಿಶೀಲಿಸಿ ಫಲಾನುಭವಿಗಳಿಗೆ ನೀಡಲಾಗುವುದು ಎಂದು ಆಹಾರ ಇಲಾಖೆ ತಿಳಿಸಿದೆ.

ಸರ್ಕಾರದಿಂದ ಪ್ರತಿ ಬಿಪಿಎಲ್ ಕುಟುಂಬದ ಹೆಣ್ಣು ಮಕ್ಕಳಿಗೆ ಸಿಗುತ್ತೆ ₹1,50,000 ರೂಪಾಯಿ

ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್!

Pradhan Mantri Garib Kalyan Yojanaಕೇಂದ್ರ ಸರ್ಕಾರದಿಂದ ಜಾರಿಗೊಂಡ ಗರೀಬ್ ಕಲ್ಯಾಣ ಯೋಜನೆಯ ಉಚಿತ ಪಡಿತರ ನೀಡುವ ಯೋಜನೆ ಡಿಸೆಂಬರ್ 31, 2023 ಕ್ಕೆ ಕೊನೆಗೊಳ್ಳಬೇಕಿತ್ತು. ಈ ಹಿಂದೆ ರಿಯಾಯಿತಿ ದರದಲ್ಲಿ ಅಕ್ಕಿ ವಿತರಣೆ ಮಾಡುತ್ತಿದ್ದ ಕೇಂದ್ರ ಸರ್ಕಾರ ಕೋವಿಡ್ 19 (covid-19) ಪರಿಸ್ಥಿತಿಯಲ್ಲಿ ಜನರಿಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಬಡವರ ಹಸಿವನ್ನು ನಿವಾರಿಸುವ ಸಲುವಾಗಿ ಉಚಿತವಾಗಿ 5 ಕೆಜಿ ಅಕ್ಕಿಯನ್ನು ನೀಡುತ್ತಿತ್ತು.

ಇದೀಗ ಛತ್ತೀಸ್ಗಡ (Chhattisgarh) ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಜಿ (PM Narendra Modi) ಅವರು ಉಚಿತ ಅಕ್ಕಿ ವಿತರಣೆಯನ್ನು ಮುಂದಿನ ಐದು ವರ್ಷಗಳ ಕಾಲ ಮುಂದುವರಿಸುವುದಾಗಿ ಹೇಳಿದ್ದಾರೆ.

ಇದಕ್ಕಾಗಿ ಸರ್ಕಾರಕ್ಕೆ ಎರಡು ಲಕ್ಷ ಕೋಟಿ ಹೆಚ್ಚುವರಿ ಹೊರೆ ಆಗಲಿದೆ. ಆದರೆ ಬಡವರ ಹಸಿವನ್ನು ನೀಗಿಸುವ ಸಲುವಾಗಿ ಈ ಉಚಿತ ಅಕ್ಕಿ ವಿತರಣೆ ಕೆಲಸವನ್ನು ಮುಂದುವರಿಸಲಿದ್ದೇವೆ ಎಂದು ಮಾನ್ಯ ಪ್ರಧಾನಮಂತ್ರಿ ಜಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮಹತ್ತರ ಯೋಜನೆ, ಪ್ರತಿ ತಿಂಗಳು ಪಡೆದುಕೊಳ್ಳಿ 36,000 ಪಿಂಚಣಿ

ಮಿಜೋರಾಂ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್ಗಢ ಈ ಐದು ರಾಜ್ಯಗಳಲ್ಲಿ ಸದ್ಯದಲ್ಲಿಯೇ ವಿಧಾನಸಭಾ ಚುನಾವಣೆ ನಡೆಯಲಿದೆ ಈ ರಾಜ್ಯಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಅಧಿಕಾರಕ್ಕೆ ಬರಲು ತಮ್ಮದೇ ಆದ ರೀತಿಯಲ್ಲಿ ಜನರಿಗೆ ಭರವಸೆ ನೀಡುತ್ತಿದ್ದಾರೆ.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಛತ್ತೀಸ್ಗಡ್ ಗೆ ಭೇಟಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಉಚಿತವಾಗಿ ಅಕ್ಕಿ ನೀಡುವ ಕೆಲಸವನ್ನು ಇನ್ನೂ ಐದು ವರ್ಷಗಳ ಕಾಲ ಮುಂದುವರಿಸುವುದಾಗಿ ತಿಳಿಸಿದ್ದಾರೆ.

ಇದರಿಂದ ಕೋಟ್ಯಾಂತರ ಕುಟುಂಬಗಳು 5 ಕೆಜಿ ಅಕ್ಕಿಯನ್ನು ಸರ್ಕಾರದಿಂದ ಉಚಿತವಾಗಿ ಪಡೆದುಕೊಳ್ಳಬಹುದು. ಇದರ ಜೊತೆಗೆ ರಾಜ್ಯ ಸರ್ಕಾರ ಕೂಡ 5 ಕೆಜಿ ಅಕ್ಕಿ ವಿತರಣೆ ಮಾಡಲು ಆರಂಭಿಸಿದರೆ ಸಾಕಷ್ಟು ಬಡವರ ಹಸಿವು ನಿವಾರಣೆಯಾಗುತ್ತದೆ ಎಂದೇ ಹೇಳಬಹುದು.

5 more years of free rice distribution to BPL card holders