ಉತ್ತರ ಪ್ರದೇಶದ ಚಿತ್ರಕೂಟ ರಸ್ತೆ ಅಪಘಾತ, ವಾಹನ ಹರಿದು 6 ಮಂದಿ ಸಾವು

Chitrakoot Road Accident: ಉತ್ತರ ಪ್ರದೇಶದ (Uttarpradesh) ಚಿತ್ರಕೂಟ ರಸ್ತೆ ಅಪಘಾತದಲ್ಲಿ 6 ಮಂದಿ ಮೃತರಾಗಿದ್ದು, ಆದಿತ್ಯನಾಥ್ ಅವರು ಎಕ್ಸ್ ಗ್ರೇಷಿಯಾ ಘೋಷಿಸಿದ್ದಾರೆ. ರಸ್ತೆ ಬದಿ ಕುಳಿತಿದ್ದವರ ಮೇಲೆ ವಾಹನ ಹರಿದು 6 ಮಂದಿ ಸಾವನ್ನಪ್ಪಿದ್ದಾರೆ.
ಪಿಕಪ್ ವಾಹನ ನಿಯಂತ್ರಣ ತಪ್ಪಿ ಅಪಘಾತ – ಪಿಕಪ್ ವಾಹನ ಹರಿದು ಆರು ಮಂದಿ ಸಾವು
ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ ಶನಿವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತರಕಾರಿ ತುಂಬಿಕೊಂಡು ಹೋಗುತ್ತಿದ್ದ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ಕುಳಿತಿದ್ದ ಎಂಟು ಜನರ ಮೇಲೆ ಹರಿದಿದೆ. ಈ ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಭರತ್‌ಕಾಪ್ ಪೊಲೀಸ್ ಠಾಣೆ ವ್ಯಾಪ್ತಿ
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಭರತ್‌ಕಾಪ್ ಪೊಲೀಸ್ ಠಾಣೆ ವ್ಯಾಪ್ತಿಯ ರೌಲಿ ಕಲ್ಯಾಣಪುರ ಗ್ರಾಮದ ಬಳಿ ಶನಿವಾರ ಈ ಘಟನೆ ನಡೆದಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆದೇಶ ಹೊರಡಿಸಲಾಗಿದೆ.
6 Dead In Chitrakoot Road Accident Adityanath Announces Ex Gratia
ನಾಳೆಯ ದಿನ ಭವಿಷ್ಯ: 12-11-2026, ಗುರುವಾರ
Read the story
ಹಾಸನಾಂಬೆ ಜಾತ್ರೆಗೆ ತೆರೆ; ಮತ್ತೆ ದೇವಿ ದರ್ಶನಕ್ಕೆ ಒಂದು ವರ್ಷ ಕಾಯಬೇಕು
Read the story
ನಮಗೂ 3,600 ದರ ನೀಡಿ; ಹಾವೇರಿ ಕಬ್ಬು ಬೆಳೆಗಾರರ ಪಟ್ಟು
Read the story
ತಾತನ ಆಸ್ತಿಯಲ್ಲಿ ಮೊಮ್ಮಗನಿಗೆ ಹಕ್ಕಿಲ್ಲ! ಹೈಕೋರ್ಟ್ ಮಹತ್ವದ ತೀರ್ಪು
Read the story
ಗುಡ್ ನ್ಯೂಸ್; ರೇಷನ್ ಕಾರ್ಡ್ ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ
Read the story





