ಭೀಕರ ರಸ್ತೆ ಅಪಘಾತ: ಬಸ್‌ಗೆ ಕಾರು ಡಿಕ್ಕಿ, ಆರು ಮಂದಿ ಸಾವು

ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಾಡಿಯಾ ಜಿಲ್ಲೆಯಲ್ಲಿ ಬಸ್ ಮತ್ತು ಕಾರು ಡಿಕ್ಕಿಯಾಗಿ ಆರು ಮಂದಿ ಸಾವಿಗೀಡಾಗಿದ್ದಾರೆ

  • ನದಿಯಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ
  • ಕಾರು ಮತ್ತು ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದು ಆರು ಮಂದಿ ಸಾವು
  • ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ

ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಾಡಿಯಾ ಜಿಲ್ಲೆಯಲ್ಲಿ ಬಸ್ ಮತ್ತು ಕಾರು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಾಂಥಾಲಿಯಾ ಪ್ರದೇಶದ ಬಳಿ ಕೃಷ್ಣನಗರ-ಕರಿಂಪುರ ರಾಜ್ಯ ಹೆದ್ದಾರಿಯಲ್ಲಿ ಕೋಲ್ಕತ್ತಾಗೆ ಹೋಗುತ್ತಿದ್ದ ಕಾರು ಬಸ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಸಮಯದಲ್ಲಿ ಕಾರಿನಲ್ಲಿ ಆರು ಜನರಿದ್ದರು. ಅವರೆಲ್ಲರೂ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಅನೇಕ ಜನರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಕಾರು ಅತಿ ವೇಗದಲ್ಲಿದ್ದದ್ದೇ ಕಾರಣವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

6 Dead in Horrific West Bengal Road Crash

English Summary▼

TRENDING ARTICLES1 / 4
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories