ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ, ಆರು ಮಂದಿ ಸಾವು
ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಚಾಲಕನ ನಿರ್ಲಕ್ಷ್ಯ ಆರು ಜೀವಗಳನ್ನು ಬಲಿ ತೆಗೆದುಕೊಂಡಿದೆ
ಅಹಮದಾಬಾದ್: ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಚಾಲಕನ ನಿರ್ಲಕ್ಷ್ಯ ಆರು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಆನಂದ್ ಜಿಲ್ಲೆಯ ದಾಲಿ ಗ್ರಾಮದಲ್ಲಿ ವೇಗವಾಗಿ ಬಂದ ಕಾರೊಂದು ಆಟೋ ಮತ್ತು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಮೃತರಲ್ಲಿ ನಾಲ್ವರು ಆಟೋದಲ್ಲಿ ಹಾಗೂ ಇಬ್ಬರು ದ್ವಿಚಕ್ರವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಅತಿವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗುಪ್ತಾ ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಅಪಘಾತಕ್ಕೆ ಕಾರಣವಾದ ಕಾರು ಕಾಂಗ್ರೆಸ್ ಪಕ್ಷದ ಸೋಜಿತ್ರಾ ಶಾಸಕ ಪೂನಂಭಾಯಿ ಮಾಧಭಾಯಿ ಪರ್ಮಾರ್ ಅವರ ಅಳಿಯ ಎಂದು ಗುರುತಿಸಲಾಗಿದೆ.
6 killed after suv rams into bike rickshaw in gujarats anand
Follow us On
Google News |
Advertisement