ಜಮ್ಮು ಕಾಶ್ಮೀರ ಕಥುವಾದಲ್ಲಿ ಭಾರೀ ಅಗ್ನಿ ಅವಘಡ, 6 ಮಂದಿ ಸಾವು
ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಬುಧವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಮನೆಯಾದ್ಯಂತ ವ್ಯಾಪಿಸಿದೆ. ಉಸಿರುಗಟ್ಟಿ ಆರು ಮಂದಿ ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಥುವಾದಲ್ಲಿ ಬುಧವಾರ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ಶಿವನಗರದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಮನೆಯಾದ್ಯಂತ ವ್ಯಾಪಿಸಿ ಉಸಿರುಗಟ್ಟಿ ಆರು ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಇನ್ನು ಮೂವರು ಪ್ರಜ್ಞಾಹೀನರಾಗಿದ್ದರು. ಅವರನ್ನು ಚಿಕಿತ್ಸೆಗಾಗಿ ಕಥುವಾದಲ್ಲಿರುವ ಜಿಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದೀಗ ಅವರ ಸ್ಥಿತಿ ಚಿಂತಾಜನಕವಾಗಿದೆಯಂತೆ.
ಅಷ್ಟರಲ್ಲಿ ಅಗ್ನಿ ಅವಘಡದ ವಿಷಯ ತಿಳಿದ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
6 Killed in Fire Accident at Kathua, Jammu and Kashmir