India News

ಇನ್ನೋವಾ ಕಾರು ಮತ್ತು ಟ್ರಕ್ ಡಿಕ್ಕಿಯಾಗಿ ಆರು ವಿದ್ಯಾರ್ಥಿಗಳು ಸಾವು

ಡೆಹ್ರಾಡೂನ್ (Dehradun): ಉತ್ತರಾಖಂಡ್‌ನಲ್ಲಿ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ್ದು ಆರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ರಾಜ್ಯದ ರಾಜಧಾನಿ ಡೆಹ್ರಾಡೂನ್‌ನಲ್ಲಿ ಟ್ರಕ್ ಅಪಘಾತದಲ್ಲಿ ಆರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ.

ಟ್ರಕ್ (Truck) ಮತ್ತು ಇನ್ನೋವಾ ಕಾರು (Innova Car) ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಒಎನ್‌ಜಿಸಿ ಜಂಕ್ಷನ್‌ನಲ್ಲಿ ಬೆಳಗಿನ ಜಾವ ಎರಡು ಗಂಟೆಗೆ ಅಪಘಾತ ಸಂಭವಿಸಿದೆ.

ಇನ್ನೋವಾ ಕಾರು ಮತ್ತು ಟ್ರಕ್ ಡಿಕ್ಕಿಯಾಗಿ ಆರು ವಿದ್ಯಾರ್ಥಿಗಳು ಸಾವು

ಕಾರಿನಲ್ಲಿ ಏಳು ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದೆ. ಅದರಲ್ಲಿ ಮೂವರು ಯುವತಿಯರು ಮತ್ತು ಮೂವರು ಯುವಕರು ಸಾವನ್ನಪ್ಪಿದ್ದಾರೆ. ಆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಓರ್ವ ವಿದ್ಯಾರ್ಥಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳು ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ.

ಭೀಕರ ಟ್ರಕ್ ಡಿಕ್ಕಿಯಿಂದ ಇನ್ನೋವಾ ಛಿದ್ರಗೊಂಡಿದೆ. ಮೃತ ದೇಹಗಳನ್ನು ಹೊರತೆಗೆಯಲು ಕಾರನ್ನು ಕತ್ತರಿಸಬೇಕಾಯಿತು. ಲಾರಿ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ.

ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ಬಂದು ಮೃತದೇಹಗಳನ್ನು ಹೊರತೆಗೆದಿದ್ದಾರೆ. ವಿದ್ಯಾರ್ಥಿಗಳ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ

6 Students Killed In Innova Car And Truck Collision In Dehradun

Our Whatsapp Channel is Live Now 👇

Whatsapp Channel

Related Stories