ಪಿಕಪ್ ವ್ಯಾನ್ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ, 7 ಮಂದಿ ಸಾವು

ಪಿಕಪ್ ವ್ಯಾನ್ ನಿಯಂತ್ರಣ ತಪ್ಪಿ 30 ಅಡಿ ಆಳದ ಕಣಿವೆಗೆ ಬಿದ್ದ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ದೂರು ದಾಖಲಿಸಿದ್ದಾರೆ

  • ಮಹಾರಾಷ್ಟ್ರದ ಚಕನ್‌ನಲ್ಲಿ ಭೀಕರ ರಸ್ತೆ ಅಪಘಾತ
  • ಪಿಕಪ್ ವ್ಯಾನ್ ಕಣಿವೆಗೆ ಬಿದ್ದು 7 ಮಂದಿ ಸಾವು
  • ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು

ಮಹಾರಾಷ್ಟ್ರದ (Maharashtra) ಪೂಣೆಯ ಚಕನ್ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ನಡೆದಿದೆ. ಪಿಕಪ್ ವ್ಯಾನ್ ನಿಯಂತ್ರಣ ತಪ್ಪಿ 30 ಅಡಿ ಆಳದ ಕಣಿವೆಗೆ ಬಿದ್ದ ಪರಿಣಾಮ 7 ಮಂದಿ ಅತಿದಾರುಣವಾಗಿ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಪಾಪಲ್‌ವಾಡಿ ಗ್ರಾಮದ ಮಹಿಳೆಯರು ಮತ್ತು ಮಕ್ಕಳು ಶ್ರಾವಣ ಮಾಸದ ಸೋಮವಾರದಂದು ಕುಂದೇಶ್ವರ್ ದೇವಾಲಯಕ್ಕೆ ತೆರಳುತ್ತಿದ್ದರು. ಆದರೆ, ಪ್ರಯಾಣ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ್ದು, ವಾಹನ ರಸ್ತೆ ಬದಿಯಿಂದ ನೇರವಾಗಿ ಕಣಿವೆಗೆ ಬಿದ್ದಿತು.

ಇದನ್ನೂ ಓದಿ: ರಾಖಿ ಕಟ್ಟಿದ ತಂಗಿಯನ್ನೇ ಕೊಂದ ಅಣ್ಣ! ಕಾರಣ ಕೇಳಿ ಬೆಚ್ಚಿಬಿದ್ದ ಪೊಲೀಸರು

ಈ ಭೀಕರ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಗಾಯಾಳುಗಳಿಗೆ ಸ್ಥಳೀಯರು ಹಾಗೂ ಪೊಲೀಸರು ಕೂಡಲೇ ನೆರವು ನೀಡಿದರು. ಪಿಂಪ್ರಿ-ಚಿಂಚ್ವಾಡ್ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.

ಸ್ಥಳೀಯರ ಪ್ರಕಾರ, ರಸ್ತೆ ತಿರುವಿನ ಭಾಗದಲ್ಲಿ ವಾಹನದ ವೇಗ ಹೆಚ್ಚು ಇದ್ದ ಕಾರಣ ಚಾಲಕ ನಿಯಂತ್ರಣ ಕಳೆದುಕೊಂಡಿರಬಹುದು. ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

7 Dead in Maharashtra Road Accident

English Summary▼

TRENDING ARTICLES1 / 4
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories