ರಸ್ತೆ ಅಪಘಾತದಲ್ಲಿ ನವದಂಪತಿ ಸೇರಿ ಒಂದೇ ಕುಟುಂಬದ ಏಳು ಮಂದಿ ಸಾವು

Story Highlights

ಕಾರು-ಆಟೋ ಡಿಕ್ಕಿಯಾಗಿ ಏಳು ಮಂದಿ ಸಾವನ್ನಪ್ಪಿದ್ದಾರೆ, ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಈ ಘಟನೆ ನಡೆದಿದೆ, ಆಟೋಗೆ ಹಿಂದಿನಿಂದ ಕಾರೊಂದು ಡಿಕ್ಕಿ ಹೊಡೆದಿದೆ.

ಬಿಜ್ನೋರ್: ಉತ್ತರ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವದಂಪತಿ ಸಾವನ್ನಪ್ಪಿದ್ದಾರೆ. ಇವರೊಂದಿಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಐವರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಓವರ್ ಟೇಕ್ ಮಾಡುವ ವೇಳೆ ಆಟೋಗೆ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ನಂತರ ಆಟೊ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಶನಿವಾರ ಬೆಳಗಿನ ಜಾವ ಎರಡು ಗಂಟೆಗೆ ಅಪಘಾತ ಸಂಭವಿಸಿದೆ. ಡೆಹ್ರಾಡೂನ್-ನೈನಿತಾಲ್ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೇಗದಲ್ಲಿ ಕಾರು ಡಿಕ್ಕಿ ಹೊಡೆದಿದ್ದರಿಂದ ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕರು ಒಮ್ಮೆಲೇ ಕೆಳಗೆ ಬಿದ್ದಿದ್ದಾರೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಚಾಲಕ ಅಜಾಬ್ ಸಿಂಗ್ ಮೃತಪಟ್ಟಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್ಪಿ ಅಭಿಷೇಕ್ ತಿಳಿಸಿದ್ದಾರೆ.

7 People Including Newly Wed Couple Die In Road Accident In Uttar Pradesh

Related Stories