ಖಾಸಗಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ, 7 ಕಾರ್ಮಿಕರು ಸಾವು

Chemical Factory Fire: ರಾಜಸ್ಥಾನದ ಭಿವಾಡಿಯಲ್ಲಿ ಖಾಸಗಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟ ಧಾರುಣ ಘಟನೆ ನಡೆದಿದೆ.

  • ಕೆಮಿಕಲ್ ಫ್ಯಾಕ್ಟರಿ ಅಗ್ನಿ ದುರಂತ
  • ಅವಘಡಲ್ಲಿ 7 ಕಾರ್ಮಿಕರು ಸಾವು
  • ಕೈಗಾರಿಕಾ ಪ್ರದೇಶದ ಕೆಮಿಕಲ್ ಫ್ಯಾಕ್ಟರಿ

Chemical Factory Fire: ರಾಜಸ್ಥಾನದ ಭಿವಾಡಿ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಕೆಮಿಕಲ್ ಫ್ಯಾಕ್ಟರಿ ಅಗ್ನಿ ದುರಂತ ಹೃದಯ ಕಲುಕುವಂತಾಗಿದೆ. ಬೆಳಿಗ್ಗೆ ಸುಮಾರು 9.30ರ ವೇಳೆಗೆ ಖಾಸಗಿ ರಾಸಾಯನಿಕ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಕಾರ್ಖಾನೆ ಸಂಪೂರ್ಣವಾಗಿ ಜ್ವಾಲೆಗಾಹುತಿಯಾಯಿತು.

ಅಗ್ನಿ ಕಾಣಿಸಿಕೊಂಡಾಗ ಕಾರ್ಖಾನೆಯಲ್ಲಿ ಸುಮಾರು 25 ಮಂದಿ ಕೆಲಸ ಮಾಡುತ್ತಿದ್ದರು. ಹೊಗೆ ಮತ್ತು ಜ್ವಾಲೆಗಳನ್ನು ಗಮನಿಸಿದ ಕೆಲವರು ತಕ್ಷಣ ಹೊರಗೆ ಓಡಿ ಪಾರಾದರು. ಆದರೆ ಕೆಲವರು ಒಳಗೇ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿ, ಸುಮಾರು ಒಂದೂವರೆ ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ನಿಯಂತ್ರಿಸಿದರು.

ಈ ದುರ್ಘಟನೆಯಲ್ಲಿ ಏಳು ಕಾರ್ಮಿಕರು ಮೃತಪಟ್ಟಿರುವುದು ದೃಢಪಟ್ಟಿದೆ. ಇನ್ನೂ ಸುಮಾರು ಹತ್ತು ಮಂದಿ ಕಾರ್ಮಿಕರ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯನ್ನು ಅಧಿಕಾರಿಗಳು ತಳ್ಳಿ ಹಾಕಿಲ್ಲ. ಸ್ಥಳೀಯ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಹಿನ್ನೆಲೆ ಕುರಿತು ಜಿಲ್ಲಾ ಆಡಳಿತ ಮತ್ತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಭದ್ರತಾ ನಿಯಮಾವಳಿಗಳಲ್ಲಿ ಯಾವುದೇ ನಿರ್ಲಕ್ಷ್ಯ ನಡೆದಿದೆಯೇ ಎಂಬುದನ್ನು ಪತ್ತೆಹಚ್ಚಲು ಮೆಜಿಸ್ಟ್ರೇಟ್ ತನಿಖೆಗೂ ಆದೇಶಿಸಲಾಗಿದೆ. ಕುಟುಂಬಗಳ ಆಕ್ರಂದನದಿಂದ ಪ್ರದೇಶದಲ್ಲಿ ಶೋಕಮಯ ವಾತಾವರಣ ನಿರ್ಮಾಣವಾಗಿತ್ತು.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories